ಮೇ 24 ರಂದು ಬಂಜೆತನ ನಿವಾರಣೆ, ಉಪಚಾರ ಶಿಬಿರ
Infertility prevention and treatment camp on May 24th
ಲೋಕದರ್ಶನ ವರದಿ
ಕಾಗವಾಡ 21: ಮಹಾರಾಷ್ಟ್ರದ ಮಿರಜ ಪಟ್ಟಣದ ಸಚೀನ ಆಸ್ಪತ್ರೆಯಲ್ಲಿ ರವಿವಾರ ದಿ. 24 ರಂದು ಉಚಿತ ಮಹಿಳೆಯರ ಲೈಂಗಿಕ ರೋಗಗಳು, ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಖ್ಯಾತ ಸ್ತ್ರೀರೋಗ ತಜ್ಞ ಡಾ. ಸಚೀನ ಸುಗಣ್ಣವರ ತಿಳಿಸಿದ್ದಾರೆ. ಮಿರಜದಲ್ಲಿನ ಸಚೀನ ಆಸ್ಪತ್ರೆಯು ಬಂಜೆತನ ನಿವಾರಣೆ ಹಾಗೂ ಮಹಿಳೆಯರ ಲೈಂಗಿಕ ರೋಗಗಳ ನಿವಾರಣೆ ಕುರಿತು ಕಳೆದ ಹಲವಾರು ವರ್ಷಗಳಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಏರಿ್ಡಸಿ, ತನ್ನದೇ ಆದ ರೀತಿಯಲ್ಲಿ ಸಾಮಾಜಿಕ ಕಾರ್ಯವನ್ನು ಕೈಗೊಳ್ಳುತ್ತಿದೆ. ಈ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ, ಅತ್ಯಾಧುನಿಕ ಯಂತ್ರೋಪಕರಣಗಳು ಜೊತೆಗೆ ಆಸ್ಪತ್ರೆಯು ಹೈಟೆಕ್ ಸೌಲಭ್ಯವನ್ನು ಹೊಂದಿದೆ. ಪ್ರತಿ ತಿಂಗಳು ಮಹಿಳೆಯರ ಎಲ್ಲ ಲೈಂಗಿಕ ರೋಗಗಳ ಮತ್ತು ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಉಚಿತವಾಗಿ ಹಮ್ಮಿಕೊಳ್ಳುತ್ತಿದೆ.
ಈಗಾಗಲೇ ಶಿಬಿರದ ಲಾಭವನ್ನು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಅನೇಕ ರೋಗಿಗಳು ಪಡೆದುಕೊಂಡಿದ್ದಾರೆ. ಲೈಂಗಿಕ ರೋಗಗಳಿಂದ ಬಳಲುವ ಹಾಗೂ ಮಕ್ಕಳಾಗದೇ ಇರುವ ದಂಪತಿಗಳು ರವಿವಾರ ದಿ. 24 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಜರುಗುವ ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ, ಉಪಚಾರ ಮತ್ತು ಕಡಿಮೆ ಖರ್ಚಿನಲ್ಲಿ ಶಸ್ತ್ರಕ್ರೀಯೆ ಮಾಡಲಾಗುವುದು. ಇದರ ಲಾಭವನ್ನು ಪಡೆದುಕೊಳ್ಳುವಂತೆ ಡಾ. ಸಚೀನ ಸುಗಣ್ಣವರ ಮತ್ತು ನೇಹಾ ಸುಗಣ್ಣವರ ಕರೆ ನೀಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9765010834 ಸಂಪರ್ಕಿಸಬಹುದು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 