ಸಿಂಗಟಾಲೂರು ಬ್ಯಾಬೇಜ್‌ಗೆ 32,100 ಕ್ಯುಸೆಕ್ ಒಳ ಹರಿವು
Inflow of 32,100 cusecs into Singatalur Barrage
ಲೋಕದರ್ಶನ ವರದಿ
ಹೂವಿನಹಡಗಲಿ 03 : ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯ ಒಳ ಹರಿವು ಹೆಚ್ಚಳವಾಗಿದೆ. ಇಲ್ಲಿನ ಸಿಂಗಟಾಲೂರು ಏತ ನೀರಾವರಿ ಬ್ಯಾರೇಜ್ನಲ್ಲಿ ಯೋಜನೆಯ 32,100 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ತುಂಗಭದ್ರಾ ನದಿಯ ಒಳ ಹರಿವು 50 ಸಾವಿರ ಕ್ಯೂಸೆಕ್ನಿಂದ 82 ಸಾವಿರ ಕ್ಯೂಸೆಕ್ಗೆ ಹೆಚ್ಚಾಳವಾಗಿದೆ. ಬ್ಯಾರೇಜ್ ಗೇಟ್ಗಳನ್ನು ತೆರೆದು ಒಳಹರಿವು ಪ್ರಮಾಣದಷ್ಟೇ ನೀರನ್ನು ನದಿಗೆ ಹರಿಸಲಾಗುತ್ತಿದೆ. ಭಾನುವಾರ ಒಳ ಹರಿವು ಹೆಚ್ಚುತ್ತಲೇ ಇರುವುದರಿಂದ ತುಂಗಭದ್ರಾ ನದಿ ಈಗ ಮೈದುಂಬಿ ಹರಿಯುತ್ತಿದೆ.’ಬ್ಯಾರೇಜ್ನಲ್ಲಿ ನೀರಿನ ಸಂಗ್ರಹ ಮಟ್ಟವನ್ನು ಕಾಯ್ದುಕೊಂಡು ನದಿಗೆ ನೀರು ಹರಿಸುತ್ತಿದ್ದೇವೆ.
ಮಲೆನಾಡು ಪ್ರದೇಶದಲ್ಲಿ ಮಳೆಸುರಿಯುತ್ತಿರುವುದರಿಂದ ಒಳ ಹರಿವು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ತಾಲ್ಲೂಕಿನ 10 ಕೆರೆಗಳಿಗೆ ಹಾಗೂ ಕಾಲುವೆಗಳಿಗೆ ನೀರು ಹರಿಸಲು ಪ್ರಾರಂಭಿಸಿದ್ದೇವೆ’ ಎಂದು ಸಿಂಗಟಾಲೂರು ಯೋಜನೆಯ ಎಇಇ ರಾಘವೇಂದ್ರ ತಿಳಿಸಿದರು. ಮುನ್ನೆಚ್ಚರಿಕೆ ಸೂಚನೆ: ಮಲೆನಾಡಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ತುಂಗಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದೆ. ಸಿಂಗಟಾಲೂರು ಬ್ಯಾರೇಜ್ನ ಕೆಳಭಾಗದ ಪ್ರದೇಶಗಳ ಜನರು ಎಚ್ಚರದಿಂದ ಇರಬೇಕು. ನದಿಗೆ ಇಳಿಯುವುದು, ಜಾನುವಾರುಗಳನ್ನು ನದಿ ತೀರದಲ್ಲಿ ಬಿಡಬಾರದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 