ಲೋಕದರ್ಶನ ವರದಿ
ಕೂಡ್ಲಿಗಿ01: ಸಕರ್ಾರದ ಯೋಜನೆಗಳನ್ನು, ಸೌಲಭ್ಯಗಳನ್ನು ಹಾಗೂ ಮಾಹಿತಿಗಳನ್ನು ಕ್ಷೇತ್ರದ ಜನತೆಗೆ ತಲುಪಿಸುವಲ್ಲಿ ಇಲಾಖಾಧಿಕಾರಿಗಳು ಸಂಪೂರ್ಣ ವಿಫಲವಾಗಿವೆ ಅಂಥವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಂದು ಶಾಸಕ ಎನ್.ಎವೈ. ಗೋಪಾಲಕೃಷ್ಣ ಅಧಿಕಾರಿಗಳಿಗೆ ಎಚ್ಚರಿಸಿದರು.
ಅವರು ಸೋಮವಾರ ಪ್ರವಾಸಿ ಮಂದಿರಲ್ಲಿ ನಡೆದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ತಾಲೂಕು ತೀರ ಹಿಂದುಳಿದಿದ್ದು ಜನತೆ ಕೃಷಿಯನ್ನೇ ಅವಲಂಬಿಸಿದ್ದು ಅವರ ಏಳ್ಗೆಗೆ ಎಲ್ಲಾ ಇಲಾಖಾಧಿಕಾರಿಗಳು ಜನತೆಗೆ ಸ್ಪಂಧಿಸಬೇಕಿದೆ ಎಂದರು.
ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಸದಸ್ಯರೊಂದಿಗೆ ಚಚರ್ಿಸಿ ಅವರು ಸೂಚಿಸುವ ಕಾಮಗಾರಿಗಳನ್ನು ಕ್ರಿಯಾ ಯೋಜನೆಯಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು. ಕ್ರಿಯಾ ಯೋಜನೆ ರೂಪಿಸುವಾಗ ಅಧಿಕಾರಿಗಳಿಗೆ ತಮ್ಮ ಕಾರ್ಯ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಪರಿಪೂರ್ಣ ಪರಿಚಯವಿರಬೇಕು. ಇದರಿಂದ ಯಾವ ಗ್ರಾಮಕ್ಕೆ ಯಾವ ಯೋಜನೆ ನೀಡಬೇಕು ಎಂಬುದಕ್ಕೆ ಅನುಕೂಲವಾಗಲಿದೆ. ಮುಂಚಿತವಾಗಿ ಕ್ರಿಯಾ ಯೋಜನೆಗಳನ್ನು ಸಿದ್ದಪಡಿಸಿಟ್ಟುಕೊಂಡರೆ ಅನುದಾನ ಬಂದಾಗ ಅಗತ್ಯಕ್ಕೆ ಅನುಗುಣವಾಗಿ ಹಣ ಬಳಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಹಾಗೂ ತೋಟಗಾರಿಕಾ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಯೋಜನೆಗಳ ಸೌಲಭ್ಯಗಳನ್ನು, ಮಾಹಿತಿಗಳನ್ನು ರೈತರಿಗೆ ಸಮರ್ಪಕವಾಗಿ ನೀಡುತ್ತಿಲ್ಲ ಎಂಬ ಆರೋಪಗಳು ಬಂದಿದ್ದು, ಅದು ಮುಂದುವರಿಯಬಾರದು ಅಧಿಕಾರಿಗಳು ಸಮರ್ಪಕ ಯೋಜನೆಗಳನ್ನು ರೂಪಿಸದೇ ಇರುವುದು ತಾಲೂಕು ಹಿಂದುಳಿಯಲು ಕಾರಣವಾಗಿದೆ.
ಆದ್ದರಿಂದ ಎಲ್ಲಾ ಇಲಾಖೆಗಳು ಅವಶ್ಯವಾದ ಕ್ರಿಯಾ ಯೋಜನೆಗಳನ್ನು ಸಿದ್ದಪಡಿಸಿಟ್ಟುಕೊಳ್ಳಬೇಕು. ಜಿಲ್ಲೆಯ ಖನಿಜ ನಿಧಿ ಹಾಗೂ ಹೈದ್ರಾಬಾದ್ ಕನರ್ಾಟಕ ಅಭಿವೃದ್ಧಿ ಮಂಡಳಿಯಿಂದ ಸಾಕಷ್ಟು ಅನುದಾನ ಬರಲಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳವ ಮೂಲಕ ಕೂಡ್ಲಿಗಿ ತಾಲೂಕಿನಲ್ಲಿ ಅಧಿಕಾರಿಗಳ ಕೊರತೆ ಇದ್ದು, ಇರುವ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಿಂದ ಕೆಲಸ ಮಾಡಿಸಬೇಕು ಎಂದು ಜನ ಪ್ರತಿನಿಧಿಗಳಿಗೆ ಸಲಹೆ ನೀಡಿದ ಶಾಸಕರು, ಅಧಿಕಾರಿಗಳು ಸಹ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.
ಬಡವರು ಮನೆ ಕಟ್ಟಲು ಮರಳು ಸಿಗುತ್ತಿಲ್ಲ, ಎತ್ತಿನ ಗಾಡಿಯಲ್ಲಿ ಮರಳು ತರಲು ಅನುಕೂಲ ಮಾಡಿಕೊಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ನಾಯ್ಕ್ ವಲಯ ಅರಣ್ಯಧಿಕಾರಿ ಮಂಜುನಾಥ ಅವರಿಗೆ ಕೇಳಿದರು.
ಆದರೆ ಇದಕ್ಕೆ ಒಪ್ಪದ ಅರಣ್ಯಧಿಕಾರಿ ಮಂಜುನಾಥ, ಆರಣ್ಯ ಪ್ರದೇಶದಲ್ಲಿ ಮರಳು ತರಲು ಅವಕಾಶವಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಮರಳು ಕುರಿತು ಲೋಕಪಯೋಗಿ ಇಲಾಖೆ ಮರಳು ಸಂಗ್ರಹಕ್ಕೆ ಮುಂದಾಗಲಿ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಚ್. ರೇವಣ್ಣ ಹೇಳಿದರು. ಮರಳು ಸಂಗ್ರಹವನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯೇ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಹಕ ಎಂಜಿನೀಯರ್ ತಿಮ್ಮಣ್ಣ ಮಾಹಿತಿ ನೀಡಿದರು.
ತಾಲೂಕಿನ ಭೀಮ ಸಮುದ್ರ, ಸಿದ್ದಾಪುರ, ಕಡೇಕೊಳ್ಳ ಸೇರಿದಂತೆ ಅನೇಕ ಗ್ರಾಮಗಳಲ್ಲಿ ರೈತರ ಮೇಲೆ ಕರಡಿ ದಾಳಿ ಮಾಡುತ್ತವೆ. ಅದರಲ್ಲೂ ತೋಟಗಳಲ್ಲಿ ರಾತ್ರಿ ನೀರು ಹಾಯಿಸುವ ರೈತರ ಮೇಲೆ ಕರಡಿ ದಾಳಿ ಮಾಡುವ ಸಂಭವ ಹೆಚ್ಚು.
ಅದ್ದರಿಂದ ಹೆಚ್ಚು ಕರಡಿಗಳಿರುವ ಪ್ರದೇಶಗಳಲ್ಲಿ ಸಾಧ್ಯವಾದಷ್ಟು ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ಟುಗಳಿಗೆ ವಿದ್ಯುತ್ ಪೂರೈಕೆ ಮಾಡುವಂತೆ ಜೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಹಕ ಎಂಜಿನೀಯರ್ ಎ.ಎಂ.ರಾಜೇಶ್ ಅವರಿಗೆ ತಿಳಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಂ.ಎಂ.ಜೆ. ಹರ್ಷವರ್ಧನ್, ಎಸ್.ಪಿ. ರತ್ಮಮ್ಮ, ಕೆ.ಆಶಾ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬಿ.ವೆಂಕಟೇಶ್ ನಾಯ್ಕ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆಇಬಿ ಬಸವರಾಜ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.