ಗದಗ 18: ಕೊಲ್ಲಿ ರಾಷ್ಟ್ರಗಳು ಸೇರಿದಂತೆ ವಿದೇಶಗಳಿಂದ ಜಿಲ್ಲೆಗೆ ಬಂದಿರುವ ಪ್ರತಿ ಪ್ರಯಾಣಿಕರ ಸಂಪೂರ್ಣ ಮಾಹಿತಿ ಕಲೆ ಹಾಕಬೇಕು. ಪೋಲಿಸ ಇಲಾಖೆಯ ಸಹಕಾರದೊಂದಿಗೆ ತಾಲೂಕು ಆರೋಗ್ಯಾಧಿಕಾರಿಗಳು ವಿದೇಶದಿಂದ ಬಂದವರ ಮೆನಗೆ ಭೇಟಿ ನೀಡಿ ಅವರನ್ನು ತಪಾಸಣೆಗೊಳಿಸಬೇಕು. ನಿಗದಿತ ಅವಧಿಯಂತೆ ಮನೆಯಲಿಲಯೇ ಪ್ರತ್ಯೇಕವಾಗಿ ಇರುವಂತೆ ನಿಗಾವಹಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕಟ್ಟುನಿಟ್ಟಿನ ನಿದರ್ೇಶನ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ತಡೆಗಟ್ಟಲು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಟಾಸ್ಕಫೋರ್ಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ರಾಜ್ಯ ಸರ್ಕಾರ ನೀಡಿರುವ ಆದೇಶದಂತೆ ವಿದೇಶಗಳಿಂದ ಬಂದಿರುವವರು ತಮ್ಮ ಮಾಹಿತಿಯನ್ನು ನೀಡದಿರುವವರ ಮೇಲೆ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಜರುಗಿಸುವ ಎಚ್ಚರಿಕೆಯನ್ನು ಜಿಲ್ಲಾಧಿಕಾರಿಗಳು ನೀಡಿದರು.
ಕೊರೋನಾ ಸೊಂಕು ಹರಡದಂತೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ನರಗುಂದ,ಮುಂಡರಗಿ ಹಾಗೂ ರೋಣ ತಾಲೂಕು ಆಸ್ಪತ್ರೆಯಲ್ಲಿ ತಲಾ 01, ಶಿರಹಟ್ಟಿ 02 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 16 ವೆಂಟಿಲೇಟರಗಳು ಇವೆ. ಮುಂಜಾಗೃತಾ ಕ್ರಮವಾಗಿ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕು ತಡೆಗಟ್ಟಲು ಪ್ರತ್ಯೇಕ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು ಆಯುಷ ಕಾಲೇಜಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ತುತರ್ು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ವಿದೇಶದಿಂದ ಆಗಮಿಸಿರುವ 68 ಜನರ ಮೇಲೆ ನಿಗಾವಹಿಸಲಾಗಿದೆ. ಈಗಾಗಲೇ 10 ಜನರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ 9 ಜನರ ವರದಿ ನೆಗೆಟಿವ್ ಬಂದಿದ್ದು ಮುಂಜಾಗ್ರತಾ ಕ್ರಮವಾಗಿ ಐಸೋಲೆಷನನಲ್ಲಿ ಚಿಕಿತ್ಸೆ ಪಡೆಯುತ್ತಿರುವ 3 ವರ್ಷದ ಮಗುವಿನ ವರದಿ ಬರಬೇಕಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಅಲ್ಲಿಂದ ಹಾಗೂ ಕಲಬುಗರ್ಿಯಿಂದ ರೈಲು ಬಸಗಳ ಮೂಲಕ ಜಿಲ್ಲೆಗೆ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು. ಗದಗ ಹಾಗೂ ಹೊಳೆ ಆಲೂರು ರೈಲು ನಿಲ್ದಾಣಗಳಲ್ಲಿ ಥರ್ಮಲ ಸ್ಕ್ರೀನಿಂಗ ತಪಾಸಣೆಗೆ ಕ್ರಮ ವಹಿಸಬೇಕು ಸಾರಿಗೆ ಬಸಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನಿದರ್ೇಶನ ನೀಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ ಮಾತನಾಡಿ ಕೋವಿಡ-19 ಸೋಂಕಿನ ಬಗ್ಗೆ ನಿಗಾವಹಿಸಿದವರ ವರದಿ ನೆಗೆಟಿವ ಬಂದ ತಕ್ಷಣವೇ ಬಿಡುಗಡೆ ಮಾಡದೇ ನಿರಂತರ ನಿಗಾವಹಿಸಿ ಕೆಲವು ದಿನಗಳ ಕಾಲ ಜನರ ಸಂಪರ್ಕದಿಂದ ದೂರವಿರುವಂತೆ ಕ್ರಮ ಕೈಗೊಳ್ಳಬೇಕು, ಕೊರೋನಾ ವೈರಸ್ ಕುರಿತು ಜನರಲ್ಲಿ ಇನ್ನೂ ಹೆಚ್ಚು ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಪೋಲಿಸವರಿಷ್ಠಾಧಿಕಾರಿ ಯತೀಶ ಎನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಡ್, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿದರ್ೇಶಕ ಡಾ.ಪಿ.ಎಸ್.ಭೂಸರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಕರಿಗೌಡರ, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.