ನರೇಗಾದಡಿ ಮಾಹಿತಿ ವಿನಿಮಯ ಜಾಗೃತಿ ಕಾರ್ಯಕ್ರಮ
Information exchange awareness program under NAREGA
ಕಾರವಾರ, ಸೆ.17:- ಹೊನ್ನಾವರ ತಾಲೂಕಿನ ಕೊಡಾಣಿ ಹಾಗೂ ಮಾಗೋಡ ಗ್ರಾಮ ಪಂಚಾಯತ್ ಗಳಲ್ಲಿ ನರೇಗಾ ಯೋಜನೆಯ ಕುರಿತಾದ ಮಾಹಿತಿ ನೀಡಲು ಹಾಗೂ ಕೂಲಿಕಾರರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಮಂಗಳವಾರ ದುಡಿಯೋಣ ಬಾ ಅಭಿಯಾನ ಕೈಗೊಂಡು ಜಾಗೃತಿ ಮೂಡಿಸಲಾಯಿತು.
ದುಡಿಯೋಣ ಬಾ ಅಭಿಯಾನದಲ್ಲಿ ನರೇಗಾದಡಿ ಸಿಗುವ ಸೌಲತ್ತುಗಳು, ಕೂಲಿಕಾರರ ದಿನಗೂಲಿ ರೂ 370ಕ್ಕೆ ಏರಿಕೆಯಾಗಿರುವುದು, ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಹೆಚ್ಚಿಸುವುದು, ಕೆಲಸದಲ್ಲಿನ ವಿನಾಯಿತಿ, ಯೋಜನೆಯಡಿ ಸಿಗುವ ಸಹಾಯಧನದ ಬಳಕೆ, ಮಹಿಳೆಯರಿಗೆ ಇರುವ ಸೌಲತ್ತುಗಳು, ಎನ್‌ಎಮ್‌ಎಮ್‌ಎಸ್ ಹಾಜರಾತಿ ಇತ್ಯಾದಿ ವಿಷಯಗಳ ಕುರಿತು ತಾಂತ್ರಿಕ ಸಂಯೋಜಕ ಸುನೀಲ್ ಹಾಗೂ ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ ಮಾಹಿತಿ ನೀಡಿದರು.
ನಂತರ ನರೇಗಾ ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು ನೀಡುವ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಪಡೆಯುವಂತೆ ಹಾಗೂ ಸಾರ್ವಜನಿಕ ಕಾಮಗಾರಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಎಮ್ ಡಿ ಸಾದಿಕ್, ಎಮ್ ಕೆ ನಾಯ್ಕ, ಕೊಡಾಣಿ ಗ್ರಾಮ ಪಂಚಾಯತ ಅಧ್ಯಕ್ಷ ತಿಮ್ಮಪ್ಪ ನಾಯ್ಕ, ಗ್ರಾಮ ಪಂಚಾಯತ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 