ಮಹಿಳೆಯರಿಗೆ ಕಾನೂನು ಅರಿವು ಹಾಗೂ ಆರ್ಥಿಕ ಸಬಲೀಕರಣದ ಕುರಿತು ಮಾಹಿತಿ ಕಾರ್ಯಕ್ರಮ
Information program for women on legal awareness and economic empowerment
ಲೋಕದರ್ಶನ ವರದಿ
ಸಿಂದಗಿ 18: ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ, ಅನ್ಯಾಯದ ವಿರುದ್ಧ ಧೈರ್ಯದಿಂದ ಹೋರಾಡಬೇಕು ಎಂದು ವಕೀಲ ಹಾಗೂ ಸಂಪನ್ಮೂಲ ವ್ಯಕ್ತಿ ವಿನಾಯಕ ಬಡಿಗೇರ ಹೇಳಿದರು. ನಗರದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದ ವತಿಯಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಗ್ರಾಮೀಣ ಸ್ವ-ಉದ್ಯೋಗ ಮತ್ತು ಮಹಿಳಾ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರ ಸಂವಿಧಾನಬದ್ಧ ಹಕ್ಕುಗಳು, ಗೃಹ ಹಿಂಸೆ ತಡೆ ಕಾಯ್ದೆ, ವರದಕ್ಷಿಣೆ ನಿಷೇಧ ಕಾಯ್ದೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನು ನೆರವು ಪಡೆಯುವ ವಿಧಾನ, ಉಚಿತ ಕಾನೂನು ಸೇವೆಗಳ ಲಭ್ಯತೆ ಹಾಗೂ ಮಹಿಳೆಯರ ರಕ್ಷಣೆಗೆ ಇರುವ ವಿವಿಧ ಕಾನೂನುಗಳ ಕುರಿತು ಅವರು ಮಾಹಿತಿ ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಅಬ್ದುಲ್ ಅಜೀಜ್ ಯಾಡ್ರಾಮಿ ಮಾತನಾಡಿ, ಗ್ರಾಮೀಣ ಸ್ವ-ಉದ್ಯೋಗದ ಮಹತ್ವ, ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಕೃಷಿ ಆಧಾರಿತ ಉದ್ಯಮಗಳು, ಹೈನುಗಾರಿಕೆ, ಕುರಿ ಸಾಕಾಣಿಕೆ, ಸಾವಯವ ಕೃಷಿ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಆದಾಯ ಗಳಿಕೆ ಹಾಗೂ ಸರ್ಕಾರದ ವಿವಿಧ ಸ್ವ-ಉದ್ಯೋಗ ಯೋಜನೆಗಳ ಕುರಿತು ವಿವರಿಸಿದರು. ಮಹಿಳೆಯರು ತಮ್ಮ ಕೌಶಲ್ಯವನ್ನು ಬಳಸಿಕೊಂಡು ಸ್ವಂತ ಉದ್ಯಮ ಆರಂಭಿಸುವ ಮೂಲಕ ಕುಟುಂಬದ ಆರ್ಥಿಕ ಸ್ಥಿತಿಯನ್ನು ಬಲಪಡಿಸಬಹುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಸ್ಟರ್ ಪ್ರಿಯಾಂಕಾ ಮಾತನಾಡಿ, ಮಹಿಳೆಯರು ಶಿಕ್ಷಣ, ಕಾನೂನು ಅರಿವು ಹಾಗೂ ಆರ್ಥಿಕ ಸ್ವಾವಲಂಬನೆಯ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯಬೇಕು. ಮಹಿಳಾ ಸಂಘಗಳ ಮೂಲಕ ನಾಯಕತ್ವ ಬೆಳೆಸಿಕೊಂಡು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದು ಗ್ರಾಮೀಣ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ 120 ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿ, ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 