ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಪೋಸಿಸ್‌ ಫೌಂಡೇಶನ್‌ - ಜೀವನಾಶ್ಯಕ ವಸ್ತುಗಳ ವಿತರಣೆ

ಬೆಂಗಳೂರು ಏ 19,ಕರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಸಹಸ್ರಾರು ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಡಾ. ಸುಧಾ ಮೂರ್ತಿ ಮುಂದಾಗಿದ್ದಾರೆ.ಸಿನಿಮಾ ಕಾರ್ಮಿಕರ 18 ಸಂಘಟನೆಗಳ ಸಹಯೋಗದಲ್ಲಿ ಕಾರ್ಮಿಕರುಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ಇನ್ಫೋಸಿಸ್‌ ಫೌಂಡೇಶನ್‌ ವಿತರಿಸುತ್ತಿದ್ದು, ಈ ಕಾರ್ಯಕ್ಕೆ ನಗರದ ಬನಶಂಕರಿ ಪೋಸ್ಟ್‌ ಆಫೀಸ್‌ ಬಳಿ ಚಾಲನೆ ನೀಡಲಾಯಿತು.ನಿರ್ಮಾಪಕ ರಮೇಶ್‌ ರೆಡ್ಡಿ ಮಾತನಾಡಿ,  ಕರ್ನಾಟಕ ಚಲನಚಿತ್ರ  ವಾಣಿಜ್ಯ ಮಂಡಳಿಯ  ಕಲ್ಯಾಣ ನಿಧಿ ಅಧ್ಯಕ್ಷ ಸಾ ರಾ ಗೋವಿಂದು, ಕಾರ್ಮಿಕರ ಸಂಘದ ಉಪಾಧ್ಯಕ್ಷ ರವಿ ಶಂಕರ್‌ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಇನ್ಪೋಸಿಸ್‌ ಫೌಂಡೇಷನ್‌ ವತಿಯಿಂದ ಇಂದು ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳು ವಿತರಿಸಲಿದ್ದಾರೆ. ನಿರ್ಮಾಪಕ ರಮೇಶ್‌ ರೆಡ್ಡಿ, ಇನ್ಪೋಸಿಸ್‌ದೇಶ ಹಾಗೂ  ರಾಜ್ಯದಲ್ಲಿ ಅನೇಕ  ಒಳ್ಳೆಯ ಕೆಲಸಗಳು ಆಗುತ್ತಿವೆ. ಈ ತೊಂದರೆಯ ಸಮಯದಲ್ಲಿ ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿ ತೋರಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.