ಹಾವೇರಿ: 20: ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ಹಾವೇರಿ ತಾಲೂಕಿನ ಎಲ್ಲ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳು ಹಾಗೂ ವೈದ್ಯಕೀಯ ಮುನ್ನೇಚ್ಚರಿಕೆ ಕ್ರಮಕೈಗೊಳ್ಳುವಂತೆ ತಹಶೀಲ್ದಾರ್ ಶಂಕರ್ ಅವರು ಸೂಚಿಸಿದರು.
ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಗುರುವಾರ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನದ ವ್ಯವಸ್ಥೆ, ವೈದ್ಯಕೀಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕೈಗೊಳ್ಳುವಂತೆ ಸಲಹೆ ನೀಡಿದರು.
ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಿತ ಪ್ರದೇಶದಲ್ಲಿ ಯಾವುದೇ ಹೊರಗಿನ ವ್ಯಕ್ತಿಗಳ ಪ್ರವೇಶಕ್ಕೆ ಅವಕಾಶವಿಲ್ಲದಂತೆ ಕ್ರಮವಹಿಸಬೇಕು. ಪ್ರೌಢಶಿಕ್ಷಣ ಮಂಡಳಿಯ ಮಾರ್ಗಸೂಚಿಯಂತೆ ಮಾಗರ್ಾಧಿಕಾರಿ, ಕೊಠಡಿ ಮೇಲ್ವಿಚಾರಕರನ್ನೊಳಗೊಂಡಂತೆ ನಿಯೋಜಿತ ಅಧಿಕಾರಿಗಳು ತಮಗೆವಹಿಸಿದ ಪರೀಕ್ಷಾ ಕೆಲಸಗಳನ್ನು ಅಚ್ಚುಕಟ್ಟಾಗಿ ಯಾವುದೇ ಲೋಪವಿಲ್ಲದಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೊಠಡಿಯೋಳಗೆ ವಿದ್ಯಾಥರ್ಿಗಳ ನಡುವೆ ಗರಿಷ್ಠ ಅಂತರವಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳಿಗೆ ನಿಷೇಧವಿರುವುದರಿಂದ ಒಳಗಡೆ ತೆಗೆದುಕೊಂಡು ಹೋಗಲು ಅವಕಾಶವಿರುವುದಿಲ್ಲ. ಈ ಉದ್ದೇಶಕ್ಕಾಗಿ ಪ್ರತಿ ಪರೀಕ್ಷಾಕೇಂದ್ರಗಳಲ್ಲಿ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಇವರ ಬಳಿ ವಿದ್ಯಾರ್ಥಿಗಳು ತಮ್ಮ ಫೋನ್ಗಳನ್ನು ನೀಡಬೇಕು. ಈ ನಿಯಮವನ್ನು ಅಚ್ಚುಕಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರದೊಳಗೆ ಪ್ರಾಥಮಿಕ ವೈದ್ಯಕೀಯ ಹೆಲ್ಪ್ಡೆಸ್ಕ್ ಹಾಗೂ ಕೇಂದ್ರಗಳ ಸುತ್ತ ಪೊಲೀಸ್ ಬಂದೊಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಎಲ್ಲ ಕೇಂದ್ರಗಳಲ್ಲಿ ಸಿಸಿಕ್ಯಾಮರಾಗಳು ಅಳವಡಿಸಬೇಕು. ಹಾಗೂ ಅವು ಸರಿಯಾಗಿವೇ ಇಲ್ಲವೇ ಎಂದು ಪರಿಶೀಲಿಸಬೇಕು. ಮೊದಲದಿನದ ಪರೀಕ್ಷೆಯಲ್ಲಿ ನಕಲು ನಡೆಯದಂತೆ ಅಗತ್ಯ ಕ್ರಮಕೈಗೊಂಡರೆ ಉಳಿದ ಪರೀಕ್ಷೆಗಳಲ್ಲಿ ನಕಲು ನಡೆಯುವದನ್ನು ತಡೆಗಟ್ಟಬಹುದು. ಪರೀಕ್ಷೆ ಕುರಿತಂತೆ ಯಾವ ಅಧಿಕಾರಿಗಳು ನಿಷ್ಕಾಳಜಿ ತೋರಿಸಬಾರದು. ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲಕ್ಕೊಳಗಾಗದೇ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪಿಸಲು ಐದು ಮಾರ್ಗಧಿಕಾರಿಗಳ ತಂಡ ರಚಿಸಲಾಗಿದೆ. ಮೊಬೈಲ್ ಸಂಪೂರ್ಣ ನಿಷೇಧಿಸಿದ್ದು, ಮುಖ್ಯ ಪರೀಕ್ಷಾ ಮೇಲ್ವಿಚಾರಕರಿಗೆ ಮಾತ್ರ ಸಾಮಾನ್ಯ ಬೇಸಿಕ್ ಮೊಬೈಲ್ ಬಳಸಬೇಕು ಎಂದು ಸೂಚಿಸಲಾಗಿದೆ. ಹಾಗೂ ಕರೋನಾ ಮುಂಜಾಗೃತವಾಗಿ ನಗರಸಭೆ, ಪಟ್ಟಣಪಂಚಾಯತ್, ಗ್ರಾಮಪಂಚಾಯಿತಿಯವರಿಗೆ ಪರೀಕ್ಷಾ ಕೇಂದ್ರಗಳ ಸುತ್ತಲೂ ಫಾಗಿಂಗ್, ಬ್ಲಿಚಿಂಗ್ ಪೌಡರ್ ಸಿಂಪರಣೆ ಮಾಡುವಂತೆ ತಿಳಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಒಬ್ಬ ಆರೋಗ್ಯ ಹಾಗೂ ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ನಗರದಲ್ಲಿರುವ ಸೇಂಟ್ ಆನ್ಸ್ ಪ್ರೌಢಶಾಲೆ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲೆಯ ಖಾಸಗಿ ವಿದ್ಯಾಥರ್ಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹಾಗಾಗಿ ಆ ಎರಡು ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳೇಂದು ಪರಿಗಣಿಸಿ ಹೆಚ್ಚಿನ ನಿಗಾವಹಿಸಲಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಅವರು ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರಗಳ ವಿವರ: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ತಾಲೂಕಿನಾದ್ಯಂತ 13 ಪರೀಕ್ಷಾ ಕೇಂದ್ರಗಳನ್ನು ಗುತರ್ಿಸಲಾಗಿದೆ. ಮುನಸಿಪಲ್ ಹೈಸ್ಕೂಲ್, ಎಸ್.ಎಂ.ಎಸ್. ಪ್ರೌಢಶಾಲೆ, ಹುಕ್ಕೇರಿಮಠ ಪ್ರೌಢಶಾಲೆ, ಸೇಂಟ್ ಆನ್ಸ್ ಪ್ರೌಢಶಾಲೆ(1) ಮತ್ತು ಸೇಂಟ್ ಆನ್ಸ್ ಪ್ರೌಢಶಾಲೆ(2), ಎಲ್.ಇ.ಎಂ.ಎಸ್, ಹೊಸರಿತ್ತಿಯ ಜಿ.ವಿ.ಹಳ್ಳಿಕೇರಿ, ಗುತ್ತಲದ ಎಸ್.ಆರ್.ಎಸ್.ಹೆಚ್.ಎಸ್, ದೇವಗಿರಿಯ ಮಹಾತ್ಮಾಗಾಂಧಿ ಪ್ರೌಢಸಾಲೆ, ಕಾಟೇನಹಳ್ಳಿಯ ಸರಕಾರಿ ಪ್ರೌಢಶಾಲೆ, ನೆಗಳೂರಿನ ಎಂ.ಡಿ.ಆರ್.ಎಸ್, ಕಬ್ಬೂರಿನ ಸರಾಕಾರಿ ಪ್ರೌಢಶಾಲೆ, ಕರ್ಜಗಿಯ ಎಂ.ಎಂ.ಡಿ.ಆರ್.ಎಸ್ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಈ ವರ್ಷ ಹಾವೇರಿ ತಾಲೂಕಿನಲ್ಲಿ 69 ಶಾಲೆಯ 3623 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 1605 ಗಂಡು ಹಾಗೂ 1637 ಹೆಣ್ಣು ಮಕ್ಕಳು ಪರೀಕ್ಷೆ ಎದುರಿಸಲು ನೊಂದಾಯಿಸಿಕೊಂಡಿದ್ದಾರೆ. ಕನ್ನಡ ಮಾಧ್ಯಮದ 48 ಶಾಲೆಯ 1144 ಗಂಡು ಹಾಗೂ 1114 ಹೆಣ್ಣು ಮಕ್ಕಳು ಸೇರಿದಂತೆ 2258 ವಿದ್ಯಾರ್ಥಿಗಳು, ಇಂಗ್ಲೀಷ್ ಮಾಧ್ಯಮದ 15 ಶಾಲೆಯ 395 ಗಂಡು ಹಾಗೂ 285 ಹೆಣ್ಣು ಮಕ್ಕಳು ಸೇರಿದಂತೆ 680 ವಿದ್ಯಾರ್ಥಿಗಳು, ಉದರ್ು ಮಾಧ್ಯಮದ 6 ಶಾಲೆಯ 66 ಗಂಡು ಹಾಗೂ 238 ಹೆಣ್ಣು ಮಕ್ಕಳು ಸೇರಿದಂತೆ 304 ವಿದ್ಯಾರ್ಥಿಗಳು ಹಾಗೂ ಖಾಸಗಿಯ 381 ಅಭ್ಯಥರ್ಿಗಳು ಪರೀಕ್ಷೆಗಾಗಿ ನೊಂದಾಯಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಸಭೆಯಲ್ಲಿ ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಬಸವರಾಜಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಸಿ.ಎಸ್.ಭಗವಂತಗೌಡ್ರ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ಪಿ.ಎಸ್.ಐ ಪ್ರಕಾಶ ನಂದಿ, ತಾಲೂಕಾ ಪರೀಕ್ಷಾ ನೊಡೆಲ್ ಅಧಿಕಾರಿ ಸಿದ್ಧರಾಜು ಹಾಗೂ ಮತ್ತಿತರರು ಉಪಸ್ಥಿತರಿದ್ದರು.