ಗ್ರಾಮೀಣ ಪ್ರದೇಶಗಳಲ್ಲಿ ಅವಶ್ಯ ಬದುಕಿಗೆ ಮೂಲಸೌಕರ್ಯ ಅನುದಾನ ಬಿಡುಗಡೆ
Infrastructure grants released for essential living in rural areas
ಲೋಕದರ್ಶನ ವರದಿ
ಹಾನಗಲ್ 27 : ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಜನತೆಯ ನೆಮ್ಮದಿಯ ಬದುಕಿಗೆ ಅವಶ್ಯ ಮೂಲಸೌಕರ್ಯ ಕಲ್ಪಿಸಲು ಗಮನ ಹರಿಸಲಾಗಿದ್ದು, ಪ್ರತಿಯೊಂದು ಗ್ರಾಮಗಳಲ್ಲಿ ಕನಿಷ್ಟ 20 ಲಕ್ಷ ರೂ.ದಿಂದ ಒಂದು ಕೋಟಿ ರೂ.ವರೆಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ತಾಲೂಕಿನ ಕಾಲ್ವೆಯಲ್ಲಾಪುರ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಅವರು ಬಾಳಂಬೀಡ ಹಿ ಚನ್ನಾಪುರ ನಡುವಿನ ರಸ್ತೆಯನ್ನು 65 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು, ಸುತ್ತಲಿನ ಹಲವು ಗ್ರಾಮಸ್ಥರಿಗೆ ಅನುಕೂಲವಾಗಿದೆ. ಅನುದಾನ ಲಭ್ಯತೆ ಆಧರಿಸಿ ಈ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಸಮರ್ಕ ಕುಡಿಯುವ ನೀರು ಪೂರೈಕೆಗಾಗಿ ಬಹುಗ್ರಾಮ ನದಿ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿವರಿಸಿದರು.
ಮುಖಂಡರಾದ ಚಂದ್ರು ಮರೆಕ್ಕನವರ, ಭರತೇಶ ಶೇತಸನದಿ, ಚಂದ್ರಕಾಂತ ಮರೆಕ್ಕನವರ, ಗುಡ್ಡಪ್ಪ ಮಾಸನಕಟ್ಟಿ, ಉಮೇಶ ಕೋಳಿನಿಂಗಣ್ಣನವರ, ಈರಣ್ಣ ಹಿರೂರ, ನಾಗರಾಜ ಹರಿಜನ, ಜಗದೀಶ ಜಾಡರ, ಭೀರಣ್ಣ ಶೇತಸನದಿ ಸೇರಿದಂತೆ ಇನ್ನೂ ಹಲವರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 