ಬೆಳಗಾವಿ 15: ತಾಲೂಕಿನ ಕಣಬರಗಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ತನ್ನ ಎರಡು ತಿಂಗಳ ಹೆಣ್ಣು ಮಗುವನ್ನೇ ಕೆರೆಗೆ ಎಸೆದಿರುವ ಘಟನೆ ನಡೆದಿದೆ.
ಮಗುವಿಗೆ ಪಿಡ್ಸ್ ಬರುತ್ತೆ ಎಂದು ಹೆತ್ತಿರುವ ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ ಕೆರೆಗೆ ಎಸೆದಿರುವ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ಕಣಬರ್ಗಿ ಗ್ರಾಮದಲ್ಲಿ ನಡೆದಿದೆ. ತಾಯಿ ಮಗುವನ್ನು ಕೆರೆಗೆ ಎಸೆಯುವುದು ನೋಡಿದ ದನ, ಕರು ತೊಳೆಯುತ್ತಿದ್ದ ಯುವಕರು ತಕ್ಷಣವೇ ಕೆರೆಗೆ ಹಾರಿ ಮಗುವನ್ನು ರಕ್ಷಿಸಿದ್ದಾರೆ.
ಕಣಬರಗಿ ಗ್ರಾಮದ ನಿವಾಸಿ ರಾಬರ್ಟ್ ಕರವಿನಕೊಪ್ಪಿ ಎಂಬುವವರ ಪತ್ನಿ ಶಾಂತಾ (35) ಎಂಬುವವರು ಈ ಕೃತ್ಯವೆಸಗಿದ್ದಾರೆ. ಮಗುವನ್ನು ಕೆರೆಗೆ ಎಸೆದು ಓಡಿ ಹೋಗುತ್ತಿದ್ದ ತಾಯಿಯ ತಡೆದು ಸ್ಥಳೀಯರು ಬುದ್ದಿ ಹೇಳಿ ಮಗುವನ್ನು ರಕ್ಷಿಸಿ ಅವಳ ಕೈಗೆ ನೀಡಿದ್ದಾರೆ. ಬಳಿಕ ಬೆಳಗಾವಿ ನಗರದ ಚಿಕ್ಕ ಮಕ್ಕಳ ಖಾಸಗಿ ಆಸ್ಪತ್ರೆಗೆ ಮಗು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.