ಇಂಜಾಮಾಮ್ ದಾಖಲೆ ಮುರಿದ ಆಸೀಸ್ ರನ್ ಮಿಷನ್ ಸ್ಟೀವನ್ ಸ್ಮಿತ್
ಲಂಡನ್, ಸೆ 14 ಇಂಗ್ಲೆಂಡ್ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ರನ್ ಹೊಳೆ ಹರಿಸುತ್ತಿರುವ ಆಸ್ಟ್ರೇಲಿಯಾದ ರನ್ ಮಿಷನ್ ಸ್ಟೀವನ್ ಸ್ಮಿತ್ ಅವರು ದೀರ್ಘ ಅವಧಿಯ ಕ್ರಿಕೆಟ್ನಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಠಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಒಂದೇ ಎದುರಾಳಿ ತಂಡದ ವಿರುದ್ಧ ಸತತ ಅತಿ ಹೆಚ್ಚು ಅರ್ಧ ಶತಕ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆ ಮಾಡಿದರು. ಆ ಮೂಲಕ ಪಾಕಿಸ್ತಾನದ ಮಾಜಿ ನಾಯಕ ಇಂಜಾಮಾಮ್ ಉಲ್ ಹಕ್ ಅವರ ದಾಖಲೆಯನ್ನು ಮುರಿದರು. ಇಲ್ಲಿನ ಕೆನ್ನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದ ಎರಡನೇ ದಿನ ಸ್ಟೀವನ್ ಸ್ಮಿತ್ 80 ರನ್ ಗಳಿಸಿದರು. ಆ ಮೂಲಕ ಇಂಗ್ಲೆಂಡ್ ವಿರುದ್ಧ ಸತತ 10 ಅರ್ಧ ಶತಕ ಪೂರ್ಣಗೊಳಿಸಿದರು. 2001-06 ಅಂತರದಲ್ಲಿ ಪಾಕಿಸ್ತಾನ ಮಾಜಿ ನಾಯಕ ಇಂಜಾಮಾಮ್ ಉಲ್ ಹಕ್ ಅವರು ಇಂಗ್ಲೆಂಡ್ ವಿರುದ್ಧ 50 ಕ್ಕೂ ಹೆಚ್ಚು ರನ್ ಒಂಬತ್ತು ಬಾರಿ ಗಳಿಸಿ ದಾಖಲೆ ಮಾಡಿದ್ದರು. ಶುಕ್ರವಾರ ಈ ದಾಖಲೆಯನ್ನು ಸ್ಮಿತ್ ತಮ್ಮ ಹೆಸರಿಗೆ ಬರೆದುಕೊಂಡರು. ಈ ಸಾಧನೆ ಮಾಡಿದ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ದಂತಕತೆ ಕ್ಲೈವ್ ಲಾಯ್ಡ್ ಇದ್ದಾರೆ. ಇವರು ಕೂಡ ಇಂಗ್ಲೆಂಡ್ ವಿರುದ್ಧ ಒಂಬತ್ತು ಸತತ ಅರ್ಧ ಶತಕ ಸಿಡಿಸಿದ್ದರು. ಪಾಕಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ ಮಾಜಿ ಆಲ್ರೌಂಡರ್ ಜಾಕ್ ಕಾಲಿಸ್ ಅವರು ಸತತ ಎಂಟು ಅರ್ಧ ಶತಕ ಸಿಡಿಸಿದ್ದರು. ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನಗಳಲ್ಲಿ ಶ್ರೀಲಂಕಾ ಮಾಜಿ ನಾಯಕ ಕುಮಾರ ಸಂಗಕ್ಕಾರ ಇದ್ದಾರೆ. ಇವರು ಬಾಂಗ್ಲಾದೇಶ ವಿರುದ್ಧ ಎಂಟು ಅರ್ಧ ಶತಕ ಗಳಿಸಿದ್ದರು. ಐದು ಪಂದ್ಯಗಳ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಮುನ್ನಡೆ ಸಾಧಿಸಿದ್ದು, ಐದನೇ ಹಾಗೂ ಅಂತಿಮ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್ನಲ್ಲಿ 294 ರನ್ ಗಳಿಸಿತ್ತು. ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್ನಲ್ಲಿ 225 ರನ್ಗಳಿಗೆ ಆಲ್ ಔಟ್ ಆಗಿದೆ. ನಂತರ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ಶುಕ್ರವಾರ ಎರಡನೇ ದಿನದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 9 ರನ್ ಗಳಿಸಿದ್ದಾರೆ. ಆ ಮೂಲಕ 78 ರನ್ ಮುನ್ನಡೆ ಸಾಧಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 