ಗಾಯಗೊಂಡಿದ್ದ ನವಿಲು ರಕ್ಷಣೆ! ಚಿಕಿತ್ಸೆ ಬಳಿಕ ಅರಣ್ಯಕ್ಕೆ ಮುಕ್ತ
Injured peacock rescued! Released into the forest after treatment
ಲೋಕದರ್ಶನ ವರದಿ
ಮುಂಡಗೋಡ 21 : ಯಲ್ಲಾಪುರ ಮುಖ್ಯರಸ್ತೆಯ ತಟ್ಟಹಳ್ಳಿ ಸಮೀಪ ರಸ್ತೆ ಬದಿಯಲ್ಲಿ ಒದ್ದಾಡುತ್ತಿದ್ದ ನವಿಲೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಚಿಕಿತ್ಸೆಗೆ ಒಳಪಡಿಸಿದ ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಬಿದ್ದಿದ್ದ ನವಿಲಿನ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಇಲಾಖೆಯ ಸನವಳ್ಳಿ ಉಪವಲಯದ ಡಿಆರ್‌ಎಫ್‌ಒ ಅರ್ಜುನ್ ಮೊರಬ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿತು. ನವಿಲನ್ನು ಸುರಕ್ಷಿತವಾಗಿ ವಶಕ್ಕೆ ಪಡೆದು ಮುಂಡಗೋಡ ಪಟ್ಟಣದ ಪಶು ಆಸ್ಪತ್ರೆಗೆ ಸಾಗಿಸಲಾಯಿತು. ಪಶು ಆಸ್ಪತ್ರೆಯಲ್ಲಿ ವೈದ್ಯರು ನವಿಲಿಗೆ ಅಗತ್ಯ ಪ್ರಾಥಮಿಕ ಚಿಕಿತ್ಸೆ ನೀಡಿದರು. ಆರೋಗ್ಯದಲ್ಲಿ ಸುಧಾರಣೆ ಕಂಡ ಬಳಿಕ ನವಿಲನ್ನು ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಲಾಯಿತು. ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ವಾಚರ್ಗಳಾದ ಪ್ರಕಾಶ ಗೌಳಿ ಹಾಗೂ ರುದ್ರ್ಪ ಭಾಗವಹಿಸಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 