ಮಾಂಜರಿ 10: ಮುಂಬರುವ ರಾಜ್ಯ ಬಜಟ್‌ನಲ್ಲಿ ಜೈನ ಸಮಾಜಕ್ಕೆ ಜೈನ ಅಭಿವೃದ್ಧಿ ನಿಗಮ ಮಾಡುವುಗಾಗಿ ಹೇಳಿ, ಈಗ ಅಭಿವೃದ್ಧಿ ನಿಗಮ ಘೋಷಣೆ ಮಾಡದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದಂತೆ ನಡೆದುಕೊಳ್ಳದೆ ಜೈನ ಸಮಾಜಕ್ಕೆ ಅನ್ಯಾಯವೆಸಗಿದ್ದಾರೆ ಎಂದು ಭಾರತೀಯ ಜೈನ ಸಂಘಟನೆಯ ರಾಜ್ಯ ಸಂಚಾಲಕರಾದ ಅರುಣಕುಮಾರ ಯಲಗುದ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಶೇ.94 ರಷ್ಟು ಸುಶೀಕ್ಷಿತ ಜೈನ ಸಮುದಾಯದ ಜನ ಇದ್ದು, ಕಳೆದ ಹಲವಾರು ವರ್ಷಗಳಿಂದ ಜೈನ ಅಭಿವೃದ್ಧಿ ನಿಗಮ ಮಾಡುವುದಾಗಿ ಹೇಳುತ್ತ ಬಂದಿದ್ದರು. ಆದರೆ ಇಂದಿನ ಬಜೆಟ್‌ನಲ್ಲಿ ನಮ್ಮ ಸಮಾಜಕ್ಕೆ ಅಭಿವೃದ್ಧಿ ನಿಗಮ ಘೋಷಣೆ ಮಾಡದೆ ಅನ್ಯಾಯವೆಸಗಿದ್ದಾರೆ ಎಂದರು. ಕಳೆದೆ ಡಿಶಂಬರ 2024 ರಲ್ಲಿ ಬೆಳಗಾವಿತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜೈನ ಸಮಾಜದವರು ಸೇರಿರುವ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಮಾಜಕ್ಕೆ ಬರುವ ಬಜಟ್‌ನಲ್ಲಿ ಅಭಿವೃದ್ಧಿ ನಿಗಮ ಘೋಷಣೆ ಮಾಡುವುದಾಗಿ ಹೇಳಿದ್ದರು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಆಶ್ವಾಸನೆ ಕೊಟ್ಟಿದ್ದರು. ಆದರೆ ನುಡಿದಂತೆ ನಡೆಯದೆ ಜೈನ ಸಮಾಜ ನಿರ್ಲಕ್ಷಿಸಿ "ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿದರು.
ದಿಗಂಬರ ಜೈನ ಸಮಾಜದಲ್ಲಿ ಈಗಲೂ ಕೂಡ ಪ್ರತಿಶತ 40 ರಷ್ಟು ಜನ ಅತ್ಯಂತ ಕಡು ಬಡವರಿದ್ದು, ಕೃಷಿ ಕೂಲಿ ಮಾಡುತ್ತಾರೆ. ಆದರೂ ಕೂಡ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಮಾಡದೆ ಅನ್ಯಾಯವೆಸಗಿದ್ದಾರೆ. ಈಗಾಗಲೇ ಹತ್ತಕ್ಕೂ ಹೆಚ್ಚು ಸಮುದಾಯಗಳಿಗೆ ನಿಗಮ ಮಂಡಳಿ ಮಾಡಿದ್ದಾರೆ. ಆದರೆ ಜೈನ ಸಮಾಜವನ್ನು ನಿರ್ಲಕ್ಷಿಸಿದ್ದಾರೆ. ಮುಂಬರುವ ದಿನಮಾನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅರುಣಕುಮಾರ ಯಲಗುದ್ರಿ ಎಚ್ಚರಿಕೆ ನೀಡಿದ್ದಾರೆ.
ದಿಗಂಬರ ಜೈನ ಸಮಾಜದಲ್ಲಿ ಈಗಲೂ ಕೂಡ ಪ್ರತಿಶತ 40 ರಷ್ಟು ಜನ ಅತ್ಯಂತ ಕಡು ಬಡವರಿದ್ದು, ಕೃಷಿ ಕೂಲಿ ಮಾಡುತ್ತಾರೆ. ಆದರೂ ಕೂಡ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಮಾಡದೆ ಅನ್ಯಾಯವೆಸಗಿದ್ದಾರೆ. ಈಗಾಗಲೇ ಹತ್ತಕ್ಕೂ ಹೆಚ್ಚು ಸಮುದಾಯಗಳಿಗೆ ನಿಗಮ ಮಂಡಳಿ ಮಾಡಿದ್ದಾರೆ. ಆದರೆ ಜೈನ ಸಮಾಜವನ್ನು ನಿರ್ಲಕ್ಷಿಸಿದ್ದಾರೆ. ಮುಂಬರುವ ದಿನಮಾನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು
ಅರುಣಕುಮಾರ ಯಲಗುದ್ರಿ
ಭಾರತೀಯ ಜೈನ ಸಂಘಟನೆಯ ರಾಜ್ಯ ಸಂಚಾಲಕರು