ಬಡವರಿಗೆ ಅನ್ಯಾಯ, ಉಳ್ಳವರಿಗೆ ಆದ್ಯತೆ: ವಿರುಪಾಕ್ಷಪ್ಪ ಬಳ್ಳಾರಿ ಕಿಡಿ
Injustice to the poor, priority to the wealthy: Virupakshappa Ballari lashes out
ಬ್ಯಾಡಗಿ 28: ಪುರಸಭೆ ವ್ಯಾಪ್ತಿಯ ಆಶ್ರಯ ಮನೆ ಹಂಚಿಕೆ ಫಲಾನುಭವಿಗಳ ತಾತ್ಕಾಲಿಕ ಪಟ್ಟಿಯಲ್ಲಿ ಬಡವರಿಗಿಂತ ಉಳ್ಳವರೇ ಹೆಚ್ಚಿದ್ದಾರೆ ಎಂದು ಬಿಜೆಪಿ ಹಾವೇರಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀನು ಹೊಂದಿರುವವರು, ಇತ್ತೀಚೆಗೆ ಅರ್ಜಿ ಸಲ್ಲಿಸಿದವರು ಹಾಗೂ ಆದಾಯ ತೆರಿಗೆ ಪಾವತಿದಾರರ ಹೆಸರೂ ಪಟ್ಟಿಯಲ್ಲಿ ಸೇರಿದ್ದು, ನಿಜವಾದ ಅರ್ಹ ಬಡವರು ವಂಚಿತರಾಗಿದ್ದಾರೆ ಎಂದು ದೂರಿದರು. ಸೂಕ್ತ ತನಿಖೆ ನಡೆಸಿ ಅರ್ಹರಿಗೆ ನಿವೇಶನ ಹಂಚಿಕೆ ಮಾಡಬೇಕು, ಇಲ್ಲವಾದರೆ ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ನಿಂಗಪ್ಪ ಬತ್ತಲಕಟ್ಟಿ ಮಾತನಾಡಿ, ಸಾಮಾಜಿಕ ನ್ಯಾಯ ಪಾಲನೆಯಾಗಿಲ್ಲ ಎಂದು ಆರೋಪಿಸಿ, ಪಟ್ಟಿಯನ್ನು ಮರುಪರೀಶೀಲಿಸಿ ಕಡುಬಡವರಿಗೆ ಆದ್ಯತೆ ನೀಡಬೇಕು. ಇಲ್ಲವಾದರೆ ಪುರಸಭೆ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 