ಬ್ಯಾಡಗಿ15: ಕಳೆದ 2019-20 ನೇ ಸಾಲಿನಲ್ಲಿ ಬ್ಯಾಡಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಉಂಟಾದ ನೆರೆ ಹಾವಳಿಯಿಂದ ಮರು ವಸತಿ ಕಲ್ಪಿಸುವ ನಿಟ್ಟಿನಲ್ಲಿ ಮನೆಗಳ ನಿಮರ್ಾಣ ಕಾರ್ಯದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತಂತೆ ತುತರ್ು ಕ್ರಮ ಕೈಗೊಳ್ಳಬೇಕಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಒತ್ತಾಯಿಸಿದ್ದಾರೆ.
ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈಗಾಗಲೇ ಮಳೆಗಾಲ ಆರಂಭವಾಗಿದ್ದು, ನೆರೆ ಹಾನಿಗೊಳಗಾದ ಫಲಾನುಭವಿಗಳಿಗೆ ಮರು ವಸತಿ ವ್ಯವಸ್ಥೆ ಕಲ್ಪಿಸುವಲ್ಲಿ ವಿಳಂಬವಾಗುತ್ತಿದ್ದು, ಇದರಿಂದ ಸಕಾಲಕ್ಕೆ ಫಲಾನುಭವಿಗಳು ಮನೆಗಳನ್ನು ನಿಮರ್ಿಸಿ ಕೊಳ್ಳಲು ತೊಂದರೆಯಾಗಿದೆ.
ಈ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರಲ್ಲದೇ ಸ್ಥಳ ಬದಲಾವಣೆ ಕೋರಿ ಸಲ್ಲಿಸಿದ ಅಜರ್ಿಗಳನ್ನು ತುತರ್ಾಗಿ ಪರಿಶೀಲಿಸಿ ವಿಲೇವಾರಿ ಮಾಡುವಂತೆ ತಹಶೀಲ್ದಾರ ಹಾಗೂ ತಾಲೂಕಾ ಪಂಚಾಯತ ಅಧಿಕಾರಿಗಳಿಗೆ ಸೂಚಿಸಿದರು.