ಸಿಸಿ ಕ್ಯಾಮೆರಾಗಳ ಪರೀಶೀಲನೆ; ಕಾನೂನು ಮೀರುವವರಿಗೆ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ
Inspection of CCTV cameras; warning of stern action against violators.
ಲೋಕದರ್ಶನ ವರದಿ
ಸಿಸಿ ಕ್ಯಾಮೆರಾಗಳ ಪರೀಶೀಲನೆ; ಕಾನೂನು ಮೀರುವವರಿಗೆ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ
ಮಹಾಲಿಂಗಪುರ 11: ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಮಹಾಲಿಂಗಪುರ ಪೊಲೀಸರು, ನಗರದ ಪ್ರಮುಖ ಬೀದಿಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿರುವ ಅಂಗಡಿಗಳ ಸಿಸಿ ಕ್ಯಾಮೆರಾಗಳನ್ನು ಪರೀಶೀಲಿಸಿ, ಭದ್ರತಾ ನಿಗಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿದ್ದಾರೆ.
ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳು, ವೃತ್ತಗಳು ಹಾಗೂ ಗಣೇಶೋತ್ಸವದ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗುವ ಸ್ಥಳಗಳಲ್ಲಿನ ಸಿಸಿ ಕ್ಯಾಮೆರಾಗಳ ಕಾರ್ಯನಿರ್ವಹಣೆಯನ್ನು ಪೊಲೀಸರು ಪರೀಶೀಲಿಸಿದರು. ಯಾವುದೇ ಅಹಿತಕರ ಘಟನೆ ಸಂಭವಿಸಿದ ಸಂದರ್ಭದಲ್ಲಿ ದೃಶ್ಯಾವಳಿಗಳ ಮೂಲಕ ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ತ್ವರಿತವಾಗಿ ಪಡೆದು, ತಪ್ಪಿತಸ್ಥರನ್ನು ಪತ್ತೆಹಚ್ಚಲು ಅನುಕೂಲವಾಗುವಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಕಾನೂನು ಮೀರುವವರಿಗೆ ನಿರ್ದಾಕ್ಷಿಣ್ಯ ಕ್ರಮ: ಪಿಎ???
“ಗಣೇಶೋತ್ಸವವು ಭಕ್ತಿ, ಸಂಭ್ರಮ ಹಾಗೂ ಸೌಹಾರ್ದತೆಯಿಂದ ನಡೆಯಬೇಕು. ಸಾರ್ವಜನಿಕರ ಸುರಕ್ಷತೆ ಮತ್ತು ಶಾಂತಿ ಕಾಪಾಡುವುದು ಪೊಲೀಸ್ ಇಲಾಖೆಯ ಮೊದಲ ಆದ್ಯತೆಯಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರೀಶೀಲಿಸಲಾಗುತ್ತಿದ್ದು, ಅವುಗಳ ಮೂಲಕ ನಿರಂತರ ನಿಗಾ ವಹಿಸಲಾಗುತ್ತಿದೆ.
ಹಬ್ಬದ ಸಂದರ್ಭದಲ್ಲಿ ಅನುಮಾನಾಸ್ಪದ ಚಟುವಟಿಕೆ, ಗಲಾಟೆ, ಕಾನೂನುಬಾಹಿರ ಕೃತ್ಯ, ಸಾರ್ವಜನಿಕರಿಗೆ ತೊಂದರೆ ನೀಡುವ ವರ್ತನೆ ಅಥವಾ ಶಾಂತಿ ಭಂಗಕ್ಕೆ ಯತ್ನಿಸುವವರ ಮೇಲೆ ಕಟ್ಟುನಿಟ್ಟಿನ ನಿಗಾ ಇರಲಿದೆ. ಕಾನೂನು ಉಲ್ಲಂಘಿಸುವವರು ಯಾರೇ ಆಗಿರಲಿ, ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಮಣಿಯದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.
ಅಂಗಡಿ ಮಾಲೀಕರು ತಮ್ಮ ಸಿಸಿ ಕ್ಯಾಮೆರಾಗಳನ್ನು ಸದಾ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಯಾವುದೇ ಘಟನೆ ನಡೆದ ಸಂದರ್ಭದಲ್ಲಿ ಪೊಲೀಸರಿಗೆ ಅಗತ್ಯ ದೃಶ್ಯಾವಳಿಗಳನ್ನು ಒದಗಿಸುವ ಮೂಲಕ ಸಹಕರಿಸಬೇಕು. ಸಾರ್ವಜನಿಕರೂ ಸಹ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದರೆ ಕೂಡಲೇ ಪೊಲೀಸರ ಗಮನಕ್ಕೆ ತರಬೇಕು.
ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸಿ, ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು,” ಎಂದು ಪಿಎ??? ಪ್ರೀತಮ್ ನಾಯಕ್ ಅವರು ಸಾರ್ವಜನಿಕರಿಗೆ ಜಾಗೃತಿ ಹಾಗೂ ಎಚ್ಚರಿಕೆ ನೀಡಿದರು.
ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಇಲಾಖೆಯ ಮುನ್ನೆಚ್ಚರಿಕಾ ಕ್ರಮಗಳು ಮುಂದುವರಿದಿದ್ದು, ಪ್ರಮುಖ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾಗಳ ಮೂಲಕ ನಿಗಾ ವಹಿಸಲಾಗುತ್ತಿದೆ. ಪಿಎ??? ಪ್ರೀತಮ್ ನಾಯಕ್, ಪೊಲೀಸ್ ಸಿಬ್ಬಂದಿಗಳಾದ ಮಲ್ಲೇಶ ಪವಾರ, ಜಗದೀಶ ದಳವಾಯಿ , ಯಮನೂರ ಗಚಣ್ಣವರ, ವಿಠ್ಠಲ ಪಾಟೀಲ,ಸೇರಿದಂತೆ ಇತರ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 