ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

ಬಾಗಲಕೋಟೆ: ನವನಗರದಲ್ಲಿರುವ ಬಾಗಲಕೋಟೆ ತಹಶೀಲ್ದಾರ ಕಛೇರಿಗೆ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಬುಧವಾರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಹಶೀಲ್ದಾರ ಕಚೇರಿಯ ಸಿಬ್ಬಂದಿಗಳ ಕಾರ್ಯವೈಖರಿ, ಭೂಮಿ ಎ.ಜೆ.ಎಸ್.ಕೆ, ಪಡಸಾಲೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಹಾರ್ದತೆಯಿಂದ ವತರ್ಿಸಿ ಅವರ ಕೆಲಸಗಳನ್ನು ಮಾಡಿಕೊಡಲು ಸೂಚಿಸಿದರು. ನಂತರ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ ಕಾಯರ್ಾಲಯದ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಎಂ.ಗಂಗಯ್ಯ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಇದ್ದರು.