ಲಕ್ಕುಂಡಿ ನರೇಗಾ ಕಾಮಗಾರಿ ಪರೀಶೀಲನೆ, ಉದ್ಯೊಗಖಾತ್ರಿಯಲ್ಲಿ ಕೂಲಿಕಾರರ ಆರೋಗ್ಯ ತಪಾಸಣೆಗೂ ಒತ್ತು - ಸಿಇಓ ಭರತ್
ಗದಗ 03 : ಗದಗ ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2025-26ನೇ ಸಾಲಿನ ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ . ಭರತ್. ಎಸ್ ಭೇಟಿ ನೀಡಿ ಕಾಮಗಾರಿ ಗುಣಮಟ್ಟ, ಅಳತೆ, ಯೋಜನೆ ಉದ್ದೇಶ ಕುರಿತು ಕೂಲಿಕಾರರೊಂದಿಗೆ ಸಮಾಲೋಚನೆ ನೆಡೆಸಿ ನಂತರ ಕಾಮಗಾರಿ ಕಡತ, ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ (ಓಒಒಖ) ಹಾಜರಾತಿ ಪರೀಶೀಲನೆ ನೆಡೆಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಗಾಟಿಸಿ ಕಾಯಕ ಬಂಧುಗಳಿಗೆ ಹಾಗೂ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಿಸುವ ಮೂಲಕ ಚಾಲನೆ ನೀಡಿದರು. ಮನರೇಗಾ ಯೋಜನೆಯ ‘ವಲಸೆ ಯಾಕ್ರಿ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ’ ದುಡಿಮೆ ಖಾತ್ರಿ ವಿಶೇಷ ಅಭಿಯಾನದಡಿ ಪ್ರಗತಿಯಲ್ಲಿದ್ದ ಸಮುದಾಯ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರೀಶೀಲಿಸಿದರು. ಬಳಿಕ ಮಾತನಾಡಿದ ಅವರು, ಒಂದು ಆರ್ಥಿಕ ವರ್ಷದಲ್ಲಿ ಪ್ರತಿ ಜಾಬ್ ಕಾರ್ಡ್ ಗೆ 100 ದಿನ ಅಕುಶಲ ಕೂಲಿ ಕೆಲಸ ನೀಡಲಾಗುವುದು. ಕಾಮಗಾರಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಒಂದು ಕೆಲಸ ಮುಗಿದ ಮೇಲೆ ಇನ್ನೊಂದು ಕೆಲಸಕ್ಕಾಗಿ ಯೋಚನೆ ಮಾಡುವಂತಿಲ್ಲ. ಕೂಲಿಕಾರರು ನಿರಂತರವಾಗಿ ಕೆಲಸ ಮಾಡಲು ಈಗಾಗಲೇ ನರೇಗಾ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೊದನೆ ನೀಡಿದ್ದು ಒಂದು ಕುಟುಂಬಕ್ಕೆ 100 ದಿನ ಕೂಲಿ ಕೆಲಸ ನೀಡಲು ಕಾಮಗಾರಿಗಳನ್ನು ಸಿದ್ಧಪಡಿಸಲಾಗಿದೆ ಮತ್ತು ಇದರ ಬಗ್ಗೆ ತಾಲೂಕು ಮತ್ತು ಗ್ರಾಮ ಪಂಚಾಯತಿಗಳ ಹಂತದ ಅಧಿಕಾರಿಗಳಿಗೆ ಈಗಾಗಲೆ ನಿರ್ದೇಶನ ನೀಡಲಾಗಿದೆ ಎಂದರು.ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ಮಾತನಾಡಿ ನರೇಗಾ ಯೋಜನೆಯ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ/ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಎಂಬ ಶೀರ್ಷಿಕೆಯಡಿ ಏಪ್ರಿಲ್ 01 ರಿಂದ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿಯೊಬ್ಬ ನೋಂದಾಯಿತ ಕೂಲಿಕಾರರಿಗೆ ನಿರಂತರವಾಗಿ 100 ದಿನಗಳ ಕೆಲಸ ಪಡೆಯುವ ಅವಕಾಶ ಹೊಂದಿದ್ದು ನಮೂನೆ - 6 ರಲ್ಲಿ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿ ಕೆಲಸ ಪಡೆಯಬಹುದು ಹಾಗೂ ಪ್ರಸ್ತುತ ಆರ್ಥಿಕ ವರ್ಷ ಕೂಲಿ ಮೊತ್ತದಲ್ಲಿ ಭಾರಿ ಏರಿಕೆ ಕಂಡಿದ್ದು 349 ರೂ ಗಳಿದ್ದ ಕೂಲಿ ಮೊತ್ತ 370 ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು. ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಕೆಂಚಪ್ಪ ಪೂಜಾರ ಮಾತನಾಡಿ ಯೋಜನೆಯಡಿ ಪ್ರತಿ ಕೂಲಿಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಿಸಿ ವಾರ್ಷಿಕ 100 ಮಾನವ ದಿನಗಳ ಕೂಲಿ ಕೆಲಸ ನೀಡಲಾಗುತ್ತದೆ. ಗ್ರಾಮದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಎರೆ ಹುಳು ಘಟಕ, ದನದ ಕೊಟ್ಟಿಗೆ ಮುಂತಾದ ಕಾಮಗಾರಿಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಸಹಾಯಕ ನಿರ್ಧೇಶಕ . ಕುಮಾರ ಪೂಜಾರ ಮಾತನಾಡಿ ಗ್ರಾಮೀಣ ಪ್ರದೇಶದ ಬಡವರಿಗೆ, ಶ್ರಮಿಕರಿಗೆ ನರೇಗಾ ಯೋಜನೆಯು ಒಂದು ವರದಾನವಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ, ಜೊತೆಗೆ ಸಮಾನ ಕೆಲಸ. ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ, ತೃತೀಯ ಲಿಂಗಿಗಳಿಗೂ ಕೆಲಸ ನೀಡಲಾಗುತ್ತಿದೆ ಎಂದರು.ಪಂಚಾಯತ ಅಭಿವೃದ್ದಿ ಅಧಿಕಾರಿ . ಅಮೀರ ನಾಯಕ ಮಾತನಾಡಿ ನರೇಗಾ ಯೋಜನೆಯಡಿ ಉದ್ಯೋಗ ಚೀಟಿಯ ಮಹತ್ವ, ದೊರೆಯುವ ಸೌಲಭ್ಯವನ್ನು ಪಡೆಯಲು ನಿಯಮಾನುಸಾರ ಕೂಲಿ ಕಾರ್ಮಿಕರು ಕೆಲಸ ನಿರ್ವಹಣೆ ಮಾಡಬೇಕು, ಗಂಡು ಮತ್ತು ಹೆಣ್ಣಿಗೆ ಸಮಾನ ಕೂಲಿ ನೀಡಲಾಗುವುದು, ಅಳತೆಗೆ ತಕ್ಕಂತೆ ಕೆಲಸ ನಿರ್ವಹಣೆ ಮಾಡಿದರೆ ಮಾತ್ರ ಪೂರ್ಣ ಪ್ರಮಾಣದ ಕೂಲಿ ಮೊತ್ತ ಲಭ್ಯವಾಗುತ್ತದೆ ಎಂದು ತಿಳಿಸಿದರು.ತಾಲೂಕ ವೈದ್ಯಾಧಿಕಾರಿಗಳು ಡಾ. ಕೋನಾ ಮಾತನಾಡಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಸಮುದಾಯ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ನರೇಗಾ ಕೂಲಿಕಾರರಿಗೆ ಉತ್ತಮ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಸ್ಥಳದಲ್ಲಿಯೇ ಬಿಪಿ, ಶುಗರ್, ಮಧುಮೇಹ, ಅತಿ ರಕ್ತದೊತ್ತಡದಂತಹ ಪ್ರಾಥಮಿಕ ಅಸಾಂಕ್ರಮಿಕ ಗುಣಲಕ್ಷಣಗಳನ್ನು ಪತ್ತೆ ಹಚ್ಚಿ ಸೂಕ್ತ ಸಮಾಲೋಚನೆ ನೀಡಲಾಗುವುದು ಎಂದು ಅವರು ತಿಳಿಸಿದರು. ಆರೋಗ್ಯ ಸಿಬ್ಬಂದಿ ನರೇಗಾ ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸಿದ 1000ಕ್ಕೂ ಹೆಚ್ಚು ಕೂಲಿಕಾರರ ಆರೋಗ್ಯ ತಪಾಸಣೆ ಮಾಡಿದರು.ಕೋಟ್.ನರೇಗಾ ಯೋಜನೆಯ ಸಮರ್ಕ ಅನುಷ್ಠಾನದಲ್ಲಿ ಈಗ ಓಒಒಖ ಅಪ್ಲಿಕೇಶನ್ ಗಮನ ಸೆಳೆದಿದೆ. ಕೇಂದ್ರ ಸರ್ಕಾರ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ (ಓಒಒಖ) ಅಪ್ಲಿಕೇಶನ್ ಕಡ್ಡಾಯಗೊಳಿಸಿದೆ ಇದರಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಹಾಜರಾತಿಗಳನ್ನು ಜಿಯೋ ಟ್ಯಾಗ್ ಫೋಟೋಗ್ರಾಫ ಮುಖಾಂತರ ಪ್ರತಿ ದಿನ ಎರಡು ಬಾರಿ ಕಡ್ಡಾಯವಾಗಿ ಸೆರೆಹಿಡಿಯಲು ಕ್ರಮವಹಿಸಲಾಗುತ್ತಿದೆ.ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ, ತಾಲೂಕು ಐ.ಇ.ಸಿ ಸಂಯೋಜಕ ವಿರೇಶ, ತಾಂತ್ರಿಕ ಸಹಾಯಕ ಅಜಯ ಅಬ್ಬಿಗೇರಿ, ನರೇಗಾ ಸಿಬ್ಬಂದಿಗಳು, ಕಾಯಕ ಬಂಧುಗಳು, ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.ಕೋಟ್.ನರೇಗಾ ಯೋಜನೆಯ ಸಮರ್ಕ ಅನುಷ್ಠಾನದಲ್ಲಿ ಈಗ ಓಒಒಖ ಅಪ್ಲಿಕೇಶನ್ ಗಮನ ಸೆಳೆದಿದೆ. ಕೇಂದ್ರ ಸರ್ಕಾರ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ (ಓಒಒಖ) ಅಪ್ಲಿಕೇಶನ್ ಕಡ್ಡಾಯಗೊಳಿಸಿದೆ ಇದರಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಹಾಜರಾತಿಗಳನ್ನು ಜಿಯೋ ಟ್ಯಾಗ್ ಫೋಟೋಗ್ರಾಫ ಮುಖಾಂತರ ಪ್ರತಿ ದಿನ ಎರಡು ಬಾರಿ ಕಡ್ಡಾಯವಾಗಿ ಸೆರೆಹಿಡಿಯಲು ಕ್ರಮವಹಿಸಲಾಗುತ್ತಿದೆ.