ನರೇಗಾ ಕಾಮಗಾರಿಗಳ ಪರೀಶೀಲನೆ: ಗುಳಾಬಾಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೆಚ್ಚುಗೆ
Inspection of NREGA works: Appreciation for various development projects in Gulabal
ಇಂಡಿ 29: ತಾಲ್ಲೂಕಿನ ಗುಳಾಬಾಳ, ಕಪನಿಂಬರಗಿ, ರಜುಳಕಿ ಹಾಗೂ ಅಜ್ಜಟಗಿ ಗ್ರಾಮ ಪಂಚಾಯಿತಿಗಳಿಗೆ ವಿಜಯಪುರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ ನೀಡಿ, ವೀಬಿಜಿ-ರಾಮ್ಜಿ ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿದರು.
ಗುಳಾಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀಬಿಜಿ-ರಾಮ್ಜಿ ಯೋಜನೆಯಡಿ ಪ್ರಗತಿಯಲ್ಲಿರುವ ಅರಣ್ಯ ಪ್ರದೇಶದ ಇಂಗು ಕೆರೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು ಕಾಮಗಾರಿಯನ್ನು ಪರೀಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲುವೆ ಪುನಶ್ಚೇತನ, ಹೂಳು ತೆಗೆಯುವುದು, ಇಂಗು ಕೆರೆ, ಕೆನಾಲ್, ಕಾಲುವೆ ಹಾಗೂ ಜಲ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳಿಂದ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಯಾಗುವುದರ ಜೊತೆಗೆ ಸ್ಥಳೀಯ ಕೂಲಿ ಕಾರ್ಮಿಕರಿಗೆ ಉದ್ಯೋಗ ದೊರೆಯುತ್ತಿರುವುದು ಶ್ಲಾಘನೀಯ ಎಂದರು.
ಇಂಗು ಕೆರೆ ಕಾಮಗಾರಿ ಸ್ಥಳದಲ್ಲಿ 133 ಮಹಿಳೆಯರು ಹಾಗೂ 49 ಪುರುಷರು ಸೇರಿದಂತೆ ಒಟ್ಟು 182 ಕೂಲಿ ಕಾರ್ಮಿಕರು ಹಾಜರಿದ್ದರು. ಯೋಜನೆಯ ಮೂಲಕ ಗ್ರಾಮಗಳ ಅಭಿವೃದ್ಧಿ, ಜಲಮೂಲಗಳ ಸಂರಕ್ಷಣೆ ಹಾಗೂ ಕೂಲಿ ಕಾರ್ಮಿಕರ ಆರ್ಥಿಕ ಸಬಲೀಕರಣಕ್ಕೆ ಉತ್ತಮ ಅವಕಾಶ ಕಲ್ಪಿಸಲಾಗಿದೆ. ಇದೇ ಗುಣಮಟ್ಟದಲ್ಲಿ ಕಾಮಗಾರಿಗಳನ್ನು ಮುಂದುವರಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 