ಹಿರೇಕೊಡಿ ಘಟನೆ ನಂತರ ಚಿಕ್ಕೋಡಿ ತಾಲೂಕಿನಲ್ಲಿ ವಸತಿ ನಿಲಯಗಳ ಪರೀಶೀಲನೆ
Inspection of hostels in Chikkodi taluk after Hirekodi incident
ಚಿಕ್ಕೋಡಿ 19: ತಾಲೂಕಿನ ಹಿರೇಕೊಡಿ ಅಲ್ಪಸಂಖ್ಯಾತ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆ ತಾಲೂಕಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್. ವಣ್ಣೂರ, ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವೆ ಹಾಗೂ ಶಿಕ್ಷಣ ಇಲಾಖೆಯ ಎಂ.ಟಿ. ಜನಗೌಡರ ವಸತಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ವಾಸ್ತವ್ಯ ಹಾಗೂ ಅಡುಗೆ ಕೋಣೆ ಸ್ವಚ್ಛತೆ ಪರೀಶೀಲಿಸಿದರು.
ಚಿಕ್ಕೋಡಿ, ಕೇರೂರ, ಚೆಂದೂರ, ಕಲ್ಲೋಳ, ಯಕ್ಸಂಬಾ ಹಾಗೂ ಚಿಕ್ಕೋಡಿಯ ಇಂದಿರಾ ನಗರ ಮತ್ತು ರಾಮನಗರದಲ್ಲಿನ ವಸತಿ ನಿಲಯಗಳಿಗೆ ಭೇಟಿ ನೀಡಿ ಅಡುಗೆಮನೆ, ನೀರು ಶುದ್ಧೀಕರಣ ವ್ಯವಸ್ಥೆ, ವಿದ್ಯಾರ್ಥಿಗಳ ವಾಸಸ್ಥಳಗಳ ಸ್ವಚ್ಛತೆ ಇತ್ಯಾದಿಗಳನ್ನು ಪರೀಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.ಇತ್ತೀಚಿನ ಅಸ್ವಸ್ಥ ಪ್ರಕರಣ ಪುನರಾವರ್ತನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದರು. ವಸತಿ ನಿಲಯ ನಿರ್ವಾಹಕರಿಗೆ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಹೆಚ್ಚಿನ ಜವಾಬ್ದಾರಿ ವಹಿಸಲು ಸೂಚನೆ ನೀಡಲಾಗಿದ್ದು, ಅಡುಗೆ ಸಿಬ್ಬಂದಿಗೆ ಸ್ವಚ್ಛತೆಯ ಬಗ್ಗೆ ಮಾರ್ಗದರ್ಶನ ನೀಡಲಾಯಿತು.
ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಆರೋಗ್ಯ ಕಾಪಾಡುವುದು ಮುಖ್ಯ ಗುರಿ ಎಂದು ಅಧಿಕಾರಿಗಳು ಭರವಸೆ ನೀಡಿದರು.,ಪೋಟೋ: ಚಿಕ್ಕೋಡಿ: ತಾಲೂಕಾ ಮಟ್ಟದ ಅಧಿಕಾರಿಗಳು ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 