ವಿವಿಧ ಕಾಮಗಾರಿಗಳ ಪರೀಶೀಲನೆ

Inspection of various works- Vijaypur news

ವಿಜಯಪುರ 07: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ ನಂ.33 ರಲ್ಲಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳನ್ನು ವಾರ್ಡ್‌ ಸದಸ್ಯೆ ಕು. ಆರತಿ ಶಹಾಪುರ ಅವರು ಪರೀಶೀಲಿಸಿದರು. 

ಕಳೆದ ಕೆಲವು ದಿನಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ ನಂ.33ರಲ್ಲಿ ಬೀದಿ ದೀಪಗಳ ಅಳವಡಿಕೆ, ಒಳಚರಂಡಿ ವ್ಯವಸ್ಥೆ, ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಾರ್ಡ್‌ ಸದಸ್ಯೆ ಕು. ಆರತಿ ಶಹಾಪುರ ಅವರು ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಖುದ್ದಾಗಿಯೇ ಭೇಟಿ ನೀಡಿ ಕಾಮಗಾರಿಗಳ ಪರೀಶೀಲನೆ ನಡೆಸಿದರು. 

ಅಲ್ಲದೇ ಕಾಮಗಾರಿಗಳನ್ನು ಸಮರ್ಪಕವಾಗಿ ಹಾಗೂ ಉತ್ತಮ ರೀತಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. 

ಇದೇ ಸಂದರ್ಭದಲ್ಲಿ ಇಲ್ಲಿನ ಸಾರ್ವಜನಿಕರಿಂದ ಮೂಲಭೂತ ಸೌಕರ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಒಂದು ವೇಳೆ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ತಮ್ಮನ್ನು ಸಂಪರ್ಕಿಸುವಂತೆ ತಿಳಿಸಿದರು. 

ಇನ್ನು ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಖುದ್ದಾಗಿಯೇ ಭೇಟಿ ನೀಡಿ ಕಾಮಗಾರಿಗಳ ಪರೀಶೀಲನೆ ನಡೆಸಿದ ಪಾಲಿಕೆ ಸದಸ್ಯೆ ಕು.ಆರತಿ ಶಹಾಪುರ ಅವರ ನಡೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.