ದ್ಯಾಮವ್ವ ದೇವಿಯ ನೂತನ ಗೋಪುರಕ್ಕೆ ಕಳಸಾರೋಹಣ
Installation of the finial on the new gopura of Goddess Dyamavva
ರಾಣೇಬೆನ್ನೂರು, ಆ.27: ತಾಲೂಕಿನ ಸುಕ್ಷೇತ್ರ ಹಳೆ ಹುಲಿಹಳ್ಳಿ ಗ್ರಾಮದ ಗ್ರಾಮ ದೇವತೆಯಾದ ಶ್ರೀ ದ್ಯಾಮವ್ವ ದೇವಿಯ ನೂತನ ಗೋಪುರದ ಕಳಸಾರೋಹಣ ಹಾಗೂ ರೋಹಣ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.
ಕಾರ್ಯಕ್ರಮದ ಅಂಗವಾಗಿ ಕುಂಭಮೇಳ ಹಾಗೂ ಪಡ್ಲಿಗೆ ತುಂಬಿಸುವ ಧಾರ್ಮಿಕ ವಿಧಿವಿಧಾನಗಳು ನಡೆದವು. ನಂತರ ಮಧ್ಯಾಹ್ನ ಅನ್ನಪ್ರಸಾದ ಕಾರ್ಯಕ್ರಮವೂ ಜರುಗಿತು. ಈ ಸಂದರ್ಭದಲ್ಲಿ ಹಳೆ ಹುಲಿಹಳ್ಳಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತನು-ಮನ-ಧನ ಸಹಾಯದೊಂದಿಗೆ ದೇವಿಯ ಕೃಪೆಗೆ ಪಾತ್ರರಾಗುವ ಸಂಕಲ್ಪ ವ್ಯಕ್ತಪಡಿಸಿದರು.
ನೂತನ ಗೋಪುರ ನಿರ್ಮಾಣ ಹಾಗೂ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಭಕ್ತರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 