ಚಿಕ್ಕವಯಸ್ಸಿನಲ್ಲಿ ಮಕ್ಕಳಿಗೆ ಪರಿಸರ ಕಾಳಜಿ ಮೂಡಿಸಿ : ವಿಜಯ ಹೂಗಾರ್
Instill environmental awareness in children at a young age: Vijaya Hoogar
ಚಿಕ್ಕೋಡಿ 31 : ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಗುರುವಿನ ಮಾರ್ಗದರ್ಶನ ಪಡೆದರೆ ಮಾತ್ರ ನಿಶ್ಚಿತ ಗುರಿ ತಲುಪಲು ಸಾಧ್ಯವಿದೆ ಎಂದು ಸ್ಥಳೀಯ ವೈದ್ಯರಾದ ವಿಜಯ ಹೂಗಾರ್ ಅಭಿಪ್ರಾಯ ಪಟ್ಟರು. ಸ್ಥಳೀಯ ಚೌಸನ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚೌಸನ್ ನರ್ಸರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮಕ್ಕಳಲ್ಲಿ ಭರವಸೆ ಹಾಗೂ ಆತ್ಮವಿಶ್ವಾಸ ತುಂಬ ಸಲುವಾಗಿ ನರ್ಸರಿ ಶಾಲೆಯು ಪ್ರಾಯೋಗಿಕ ಕಾರ್ಯ ಚಟುವಟಿಕೆ ಕೈಗೊಂಡು ಮಕ್ಕಳಿಗೆ 25 ಕಾರ್ಯಗಾರದ ಅನುಭವ ನೀಡಿದ್ದು ನಿಜಕ್ಕೂ ಸಂತೋಷದಾಯಕ ವಿಚಾರವಾಗಿದೆ ಎಂದು ಹೇಳಿದರು.
ನಮ್ಮ ಭೂಮಿಯನ್ನು ಉಳಿಸೋಣ ಎಂಬ ವಿಷಯದ ಮೇಲೆ ಮಕ್ಕಳಿಂದ ನಡೆದ ನೃತ್ಯ ನಾಟಕ ಅತ್ಯಂತ ಅರ್ಥಪೂರ್ಣವಾಗಿತ್ತು ಇಂಥ ಚಿಕ್ಕವಯಸ್ಸಿನಲ್ಲಿ ಮಕ್ಕಳಿಗೆ ಪರಿಸರ ಸಂರಕ್ಷಣೆ ಅರಿವು ಮೂಡಿಸುತ್ತಿರುವ ಚೌಸನ್ ಶಾಲೆಯ ಪರಿಸರದ ಕಾಳಜಿ ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು. ಅತಿಥಿಯಾಗಿ ಆಗಮಿಸಿದ ಸಮಾಜ ಸೇವಕಿ ತಾರಾ ಬನ್ನಿ ಗೆರಿ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಯ ಆಯಾಮಗಳು ಮೂಲಕ ಕ್ರಿಯಾಶೀಲತೆಯೊಂದಿಗೆ ಶಿಕ್ಷಣ ನೀಡುತ್ತಿರುವ ಚೌಸನ್ ಶಾಲೆಯ ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು ಎಂದು ಹೇಳಿ ಮಕ್ಕಳನ್ನು ಕೇವಲ ಪಾಠಗಳಲ್ಲಿ ಮಾತ್ರವಲ್ಲ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಗಳಲ್ಲಿಯೂ ಬೆಳೆಸಬೇಕು.
ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಶಾಲೆಯ ನಿರ್ದೇಶಕರಾದ ಸವಿತಾ ಹೆಗಡೆಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಚೌಸನ್ ಶಿಕ್ಷಣ ಸಂಸ್ಥೆಯು ಬಹಳ ಉನ್ನತವಾಗಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕೆಂದು ಹೇಳಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಸುರೇಂದ್ರನಾಥ್ ಟಿ ಚೌಗುಲೆ ಮಾತನಾಡಿ ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ ಬಹಳ ಉಪಯುಕ್ತವಾಗಿದೆ ಇದು ವಿದ್ಯಾರ್ಥಿಗಳಿಗೆ ಸುಲಭವಾಗಿ ಕಲಿಯಲು ವಿಷಯಗಳನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಇದನ್ನು ಅಳವಡಿಸಿಕೊಂಡು ಗುರಿ ಸಾಧನೆಗೆ ಮುಂದಾಗಬೇಕು ಶಿಕ್ಷಣವೇ ಭವಿಷ್ಯದ ಯಶಸ್ಸಿನ ಮೂಲಾಧಾರ ವಾಗಿದೆ ಎಂದು ಹೇಳಿದರು.ಕವಿತಾ ಹರಕೆ ವಾರ್ಷಿಕ ವರದಿ ವಾಚಿಸಿದರು..
ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಮಾಜಿ ಶಾಸಕಿಯರಾದ ಶಕುಂತಲಾ ಟಿ.ಚೌಗುಲೆ ಪ್ರಾಂಶುಪಾಲರಾದ ಡಾಕ್ಟರ್ ತನುಜಾ ಎಸ್ ಕುಮಾರ್ ಪ್ರಾಧ್ಯಾಪಕರಾದ ಡಾ. ನಂದಕುಮಾರ್ ಸಿಂಧೆ ಡಾ. ಕನಕಾಚಲ ಕನಕಗಿರಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರದ ಡಾ. ಎಸ್ ಎಸ್ ಹಲಕಿ ಎಮ್. ಹೆಚ್ ರಾವತ್. ಪ್ರಶಾಂತ್ ಪತ್ತಾರ್ ಕೃಷ್ಣ ಅರ್ಗೆ ಮುಂತಾದವರು ಭಾಗವಹಿಸಿದ್ದರು.ಉಜ್ವಲ ಮಾನೆ ಸ್ವಾಗತಿಸಿದರು ಆಸ್ಮಾ ಜಮಾದಾರ್ ವಂದಿಸಿದರು. ಕಾರ್ಯಕ್ರಮವನ್ನು ಪ್ರಿಯಾಂಕ ಸಿಂಗಾಯಿ ನಿರೂಪಿಸಿದರು.ಈ ಸಂದರ್ಭದಲ್ಲಿ ಶಾಲೆಯ ಪುಟ್ಟ ವಿದ್ಯಾರ್ಥಿಗಳು ನಮ್ಮ ಭೂಮಿಯನ್ನು ಉಳಿಸೋಣ ಎಂಬ ವಿಷಯಧಾರಿತ ನೃತ್ಯನಾಟಕವನ್ನು ಪ್ರದರ್ಶಿಸಿ ಎಲ್ಲರ ಮನೆಗೆದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 