ಬಳ್ಳಾರಿ,ಜು.07: ರೋಗಲಕ್ಷಣಗಳಿಲ್ಲದವರನ್ನು ದಾಖಲಿಸಲಾಗುತ್ತಿರುವ ಸಾಂಸ್ಥಿಕ ಕ್ವಾರಂಟೈನ್ಗಳಲ್ಲಿ ಗುಣಮಟ್ಟದ ಆಹಾರ, ಸ್ವಚ್ಛತೆ ಬಗ್ಗೆ ದೂರುಗಳು ಬರುತ್ತಿದ್ದು, ಗುಣಮಟ್ಟದ ಆಹಾರ ಮತ್ತು ಸಮರ್ಪಕ ಸ್ವಚ್ಛತೆ ಒದಗಿಸುವಂತೆ ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದಸಿಂಗ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್ಪಿ ಹಾಗೂ ಡಿಎಚ್ಒ ಅವರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಆರೋಗ್ಯ ಸೇವೆ ಸಲ್ಲಿಸುತ್ತಿರುವ 43 ಸರಕಾರಿ ಹಾಗೂ 4ಜನ ಖಾಸಗಿ ವೈದ್ಯರು ಸೇರಿ, ಸ್ಟಾಪ್ ನಸರ್್, ಲ್ಯಾಬ್ ಟೆಕ್ನಿಷಿಯನ್, ಗ್ರೂಪ್ ಡಿ ಸೇರಿ 108ಜನ ಆರೋಗ್ಯ ಸೇವೆ ಸಲ್ಲಿಸುತ್ತಿರುವವರಿಗೆ ಕೊರೊನಾ ಸೊಂಕು ದೃಢಪಟ್ಟಿರುವುದು ಆತಂಕಕಾರಿ ಸಂಗತಿ ಎಂದು ಹೇಳಿದ ಸಚಿವರು ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ವಿವರವಾದ ಮಾಹಿತಿ ಪಡೆದರು.
ಕೊರೊನಾ ಬಗ್ಗೆ ಭಯಪಡುವುದಕ್ಕಿಂತ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಿದೆ; ಆದರೇ ಜಿಲ್ಲೆಯಲ್ಲಿ ಭಯಪಡಿಸುವವರ ಸಂಖ್ಯೆ ಕಾರ್ಯಪ್ರವೃತ್ತರಾಗಿರುವುದು ದುಃಖಕರ ಸಂಗತಿ. ಕೊರೊನಾ ಹಾಗೂ ಕೊರೊನಾ ರೋಗಿಗಳ ವಿಷಯದಲ್ಲಿ ಯಾವುದೇ ರೀತಿಯ ಭಯಪಡುವ ಅವಶ್ಯಕತೆಯಿಲ್ಲ; ಸ್ವತಃ ನಾನೇ ಕೊರೊನಾ ಸೊಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಆತ್ಮಸ್ಥೈರ್ಯ ತುಂಬುವೇ ಮತ್ತು ಈ ಪ್ರಮಾಣದಲ್ಲಿ ಚಿಕಿತ್ಸೆ ನೀಡಿದಾಗಿಯೂ ಈ ಪ್ರಮಾಣದಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ದೃತಿಗೆಟ್ಟಿರುವ ವೈದ್ಯರಿಗೂ ಧೈರ್ಯ ತುಂಬುವೆ ಎಂದರು.
ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ 1342 ಪ್ರಕರಣಗಳು ದೃಢಪಟ್ಟಿದ್ದು, 8988 ಪ್ರಥಮ ಸಂಪಕರ್ಿತರು, 3472ಜನರು ದ್ವಿತೀಯ ಸಂಪಕರ್ಿತರಿದ್ದಾರೆ ಎಂದರು.
488 ಜನ ಸೊಂಕಿತರು ಜಿಂದಾಲ್ಗೆ ಸೇರಿದವರಾಗಿದ್ದಾರೆ ಮತ್ತು ಈ ಪ್ರದೇಶದಲ್ಲಿ 66 ಕಂಟೈನ್ಮೆಂಟ್ ಝೋನ್ ಆಗಿ ಗುರುತಿಸಲಾಗಿದೆ. ಇಡೀ ಜಿಲ್ಲೆಯಾದ್ಯಂತ 301 ಸಕ್ರಿಯ ಕಂಟೈನ್ಮೆಂಟ್ ಝೋನ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಡಿಸಿ ಎಸ್.ಎಸ್.ನಕುಲ್ ಅವರು ಸಚಿವರ ಗಮನಕ್ಕೆ ತಂದರು.
ವೈದ್ಯರು, ಲ್ಯಾಬ್ ಟೆಕ್ನಿಶಿಯನ್, ಸ್ಟಾಪ್ ನಸರ್್, ಗ್ರೂಪ್ ಡಿ ಗೆ ಅಜರ್ಿ ಆಹ್ವಾನಿಸಲಾಗಿತ್ತು. ಉಳಿದವುಗಳೆಲ್ಲ ಭತರ್ಿಯಾದ್ರೂ ಸಹ ವೈದ್ಯರ ಹುದ್ದೆಗೆ ಒಂದೇ ಒಂದು ಅಜರ್ಿ ಕೂಡ ಬರಲಿಲ್ಲ ಎಂದು ಜಿಲ್ಲಾಧಿಕಾರಿ ನಕುಲ್ ಹೇಳಿದರು.
ಬಳ್ಳಾರಿ ಜಿಲ್ಲೆಯ ಕೊರೊನಾ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ, ಡಿಎಚ್ಒ ಡಾ.ಜನಾರ್ಧನ್ ಮತ್ತಿತರರು ಇದ್ದರು.