ಅರ್ಥಪೂರ್ಣ ಸ್ವಾಂತ್ರ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆಗೆ ಸೂಚನೆ
Instructions for all preparations for a meaningful Independence Day celebration
ಅರ್ಥಪೂರ್ಣ ಸ್ವಾಂತ್ರ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆಗೆ ಸೂಚನೆ
ಹಾವೇರಿ 30: ಜಿಲ್ಲಾಡಳಿತದಿಂದ ಆಗಸ್ಟ್ 15 ರಂದು ಆಯೋಜಿಸುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರ್ಯೋತ್ಸವದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಸಿದ್ಧತೆಮಾಡಿಕೊಳ್ಳಬೇಕು. ಈ ಕುರಿತಂತೆ ವಿವಿಧ ಇಲಾಖೆಗಳಿಗೆ ವಹಿಸಿರುವ ಕೆಲಸಗಳನ್ನು ಸಮನ್ವಯದಿಂದ ಹಾಗೂ ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಸ್ವಾತಂತ್ರ್ಯೋತ್ಸವದ ಆಮಂತ್ರಣ ಪತ್ರಿಕೆ, ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಆಯ್ಕೆ, ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಅಲಂಕಾರ, ರಾಷ್ಟ್ರಧ್ವಜಾರೋಹಣಕ್ಕೆ ಸಿದ್ಧತೆ, ಆಸನ ವ್ಯವಸ್ಥೆ, ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆ, ಲಘು ಉಪಹಾರ, ಶಿಷ್ಟಾಚಾರದಂತೆ ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಪೂರಕ ಸಿದ್ಧತೆಗಳನ್ನು ಮಾಡಲು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಗಸ್ಟ 14 ಮತ್ತು 15 ರಂದು ನಗರದ ವಿವಿಧ ವೃತ್ತಗಳು, ನಗರ ಸ್ವಚ್ಛತೆ, ವಿವಿಧ ವೃತ್ತಗಳಿಗೆ ದೀಪಾಲಂಕಾರ, ಕಚೇರಿಗಳಿಗೆ ದೀಪಾಲಂಕಾರ, ರಾಷ್ಟ್ರಗೀತೆ ಹಾಗೂ ನಾಡಗೀತೆ ತಂಡದ ಆಯ್ಕೆ, ಪೊಲೀಸ್ ಬ್ಯಾಂಡ್, ರಾಷ್ಟ್ರಧ್ವಜಾರೋಹಣಕ್ಕೆ ಹಾಗೂ ಪಥಸಂಚಲನಕ್ಕೆ ಸಿದ್ಧತೆ, ಸನ್ಮಾನಿತರು, ಮಾಧ್ಯಮದವರು, ಗಣ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ಬಂದೋಬಸ್ತ್, ಅಂಬ್ಯುಲೆನ್ಸ್ ಹಾಗೂ ಪ್ರಥಮ ಚಿಕಿತ್ಸೆ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಗಸ್ಟ 15ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ, 9-15ಕ್ಕೆ ಪೊಲೀಸ್, ಗೃಹರಕ್ಷಕದಳ, ಎನ್.ಸಿ.ಸಿ., ಸ್ಕೌಟ್ಸ್ ಆಂಡ್ ಗೈಡ್ಸ್, ಅಬಕಾರಿ, ಅರಣ್ಯ ಇಲಾಖೆ, ಸೇವಾದಳ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಫಥಸಂಚಲನ, ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯೋತ್ಸವ ಸಂದೇಶ , 9-30 ರಿಂದ 10-30ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆ ಗುರುಭವನದಲ್ಲಿ ಸ್ವಾತಂತ್ರ್ಯೋತ್ಸವ ನಿಮಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್ ಎಲ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಲತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 