ಕ್ಷಯರೋಗ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಸೂಚನೆ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
Instructions for necessary precautionary measures to prevent the spread of tuberculosis -District
ಲೋಕದರ್ಶನ ವರದಿ
ಕ್ಷಯರೋಗ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಾವೇರಿ:ನ.15(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕ್ಷಯರೋಗ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಕ್ಷಯ ಪರೀಕ್ಷೆ ಹೆಚ್ಚಿನ ಪ್ರಮಾಣದಲ್ಲಿ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಜರುಗಿದ ಜಿಲ್ಲಾ ಮಟ್ಟದ ಕ್ಷಯರೋಗ ವೇದಿಕೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರಂಭದ ಹಂತದಲ್ಲೇ ಕ್ಷಯರೋಗ ಗುರಿತಿಸಿ, ಚಿಕಿತ್ಸೆ ನೀಡಿದರೆ ಕ್ಷಯರೋಗ ಗುಣಪಡಿಸಿಬಹುದು. ಈ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಕ್ಷಯ ತಡೆಗೆ ಉತ್ತಮವಾಗಿ ಕಾರ್ಯನಿರ್ವಹಿಸಲಾಗುತ್ತಿದೆ, ಆದಾಗ್ಯೂ ಕ್ಷಯರೋಗಿಗಳು ಇರುವ ಸ್ಥಳಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಕ್ಷಯರೋಗಿಗಳ ಪರೀಶೀಲನೆ ಮಾಡಬೇಕು. ಧೂಮಪಾನ, ಮದ್ಯಪಾನ ಮಾಡದಂತೆ ತಿಳುವಳಿಕೆ ನೀಡಬೇಕು. ಧೂಮಪಾನ, ಮದ್ಯಪಾನದಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಮನವರಿಕೆ ಮಾಡಬೇಕು. ಕ್ಷಯ ರೋಗಿಗಳ ಮರಣ ಪ್ರಮಾಣ ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸಮಾಡಬೇಕು ಎಂದು ಸೂಚಿಸಿದರು.
ಕ್ಷಯರೋಗಿಗಳಿಗೆ ರೂ. ಒಂದು ಸಾವಿರ ಸಹಾಯಧನ ನೀಡುವ ಬದಲಾಗಿ ಪೌಷ್ಠಿಕ ಆಹಾರ ಕಿಟ್ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನಿಲೇಶ್ ಎಂ.ಎನ್. ಅವರು ಮಾತನಾಡಿ, ಮೊದಲಿಗಿಂತ ಈಗ ಕ್ಷಯರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಕ್ಷಯ ಪರೀಕ್ಷೆ ಹೆಚ್ಚಿನ ಪ್ರಮಾಣದಲ್ಲಿ ಮಾಡಲಾಗುತ್ತಿದೆ. ಧೂಮಪಾನ ಹಾಗೂ ಮದ್ಯಪಾನ ಮತ್ತು ಪೌಷ್ಠಿಕ ಆಹಾರದ ಕೊರತೆಯಿಂದ ಕ್ಷಯರೋಗಿಗಳ ಮರಣ ಕಂಡುಬರುತ್ತಿದೆ. ಕ್ಷಯರೋಗಿಗಳಿಗೆ ಧೂಮಪಾನ ಹಾಗೂ ಮದ್ಯಪಾನ ಮಾಡದಂತೆ ತಿಳುವಳಿಕೆ ನೀಡಿದರೂ ಸಹ ಮದ್ಯಪಾನ ಹಾಗೂ ಧೂಮಪಾನ ಬಿಡುತ್ತಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.
ಪ್ರಸಕ್ತ 2025ರಲ್ಲಿ ಕ್ಷಯರೋಗ ತಡೆಗೆ ಜಿಲ್ಲೆಯಲ್ಲಿ ಎನ್.ಟಿ.ಇ.ಪಿ(ಓಚಿಣಠಚಿಟ ಖಿಣಛಜಡಿಛಿಣಟ ಜಟಟಟಿಚಿಣಠ ಕಡಿಠಡಿಚಿಟಟಜ) ಉತ್ತಮ ಕಾರ್ಯಚಟುವಟಿಕೆ ಹಿನ್ನಲೆಯಲ್ಲಿ ರಾಜ್ಯದ ರಾ್ಯಂಕಿಂಗ್ ಪಟ್ಟಿಯಲ್ಲಿ ಎರಡು ಸ್ಥಾನದಲ್ಲಿ ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಪುನಿತ್, ಡಾ.ಜಗದೀಶ ಪಾಟೀಲ, ಆಯುಷ್ಯ ಅಧಿಕಾರಿ ಡಾ.ನಿಡಗುಂದಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಸೇರಿದಂತೆ ಎಲ್ಲ ತಾಲೂಕಾ ಆರೋಗ್ಯಾಧಿಕಾರಿಗಳು ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 