12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆಗೆ ಸೂಚನೆ : ಜಿಲ್ಲಾಧಿಕಾರಿ
Instructions for necessary preparations for the 12th International Yoga Day: District Collector
ಲೋಕದರ್ಶನ ವರದಿ
ಹಾವೇರಿ 10 : ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಧ್ಯೇಯವಾಕ್ಯ ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ” ಆಗಿದ್ದು, ಯೋಗದ ಮಹತ್ವವನ್ನು ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜೂನ್ 21ರಂದು ನಗರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ವೇಳಾಪಟ್ಟಿಯಂತೆ ಬೆಳಿಗ್ಗೆ 6-30 ರಿಂದ 7 ಗಂಟೆಯವರೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಅನ್ವಯ ಯೋಗ ತರಬೇತುದಾರರ ನೇತೃತ್ವದಲ್ಲಿ ಬೆಳಿಗ್ಗೆ 7 ರಿಂದ 7-45ರವರೆಗೆ ಸಾಮೂಹಿಕ ಯೋಗಾಭ್ಯಾಸ ಮತ್ತು ಪ್ರದರ್ಶನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸುಮಾರು 800 ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ 400 ಯೋಗ ಸಂಘಟನೆಗಳ ಸದಸ್ಯರು ಮತ್ತು ಸಾರ್ವಜನಿಕರು ಸೇರಿದಂತೆ ಒಟ್ಟು 1,200ಕ್ಕೂ ಹೆಚ್ಚು ಜನರು ಭಾಗವಹಿಸುವ ನೀರೀಕ್ಷೆಯಿದೆ ಎಂದರು.
ಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಯೋಗದ ಬಗ್ಗೆ ಅರಿವು ಮೂಡಿಸಲು ಶಾಲೆಗಳಲ್ಲಿ ಯೋಗಾಭ್ಯಾಸ ತರಗತಿಗಳು, ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಪೂರ್ವಭಾವಿ ಪ್ರಚಾರ ಚಟುವಟಿಕೆಗಳನ್ನು ನಡೆಸುವಂತೆ ಸೂಚನೆ ನೀಡಿದರು.
ಆಯುಷ್ ನಿರ್ದೇಶನಾಲಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಕಾರ್ಯಕ್ರಮದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಿ.ಸಿ.ನಿಡಗುಂದಿ ಅವರು ಮಾತನಾಡಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಲಘು ಉಪಹಾರ, ಕುಡಿಯುವ ನೀರು, ಯೋಗ ಮ್ಯಾಟ್‌ಗಳು ಹಾಗೂ ಇತರೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಮೇಲ್ವಿಚಾರಣೆಗಾಗಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜನೆ, ಸ್ವಚ್ಛತೆ, ನೀರಿನ ಸೌಲಭ್ಯ, ತುರ್ತು ಚಿಕಿತ್ಸೆಗೆ ವೈದ್ಯರು ಹಾಗೂ ಆಂಬ್ಯುಲೆನ್ಸ್ ನಿಯೋಜನೆ, ಅಗ್ನಿಶಾಮಕ ದಳ ಮತ್ತು ಅಗ್ನಿಶಾಮಕ ವಾಹನ ಸೌಲಭ್ಯ ಹಾಗೂ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ನಿಯೋಜನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ, ಪೌರಾಯುಕ್ತ ಕಾಂತರಾಜು, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 