ಜಯಂತಿಗಳ ಅರ್ಥಪೂರ್ಣ ಆಚರಣೆ ಸಿದ್ಧತೆಗೆ ಸೂಚನೆ : ಜಿಲ್ಲಾಧಿಕಾರಿ
Instructions for preparation for meaningful celebration of Jayanti: District Collector
ಹಾವೇರಿ 26 : ಜಗದ್ಗುರು ರೇಣುಕಾಚಾರ್ಯ ಹಾಗೂ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಗದ್ಗುರು ರೇಣುಕಾಚಾರ್ಯ ಹಾಗೂ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಗದ್ಗುರು ರೇಣುಕಾಚಾರ್ಯ ಜಯಂತಿ ಮಾರ್ಚ್ 1 ರಂದು ಬೆಳಿಗ್ಗೆ 11 ಗಂಟೆಗೆ ಹಾವೇರಿ ನಗರದ ಜಗದ್ಗುರು ರೇಣುಕ ಮಂದಿರ(ನುಡಿನಮಠ)ದಲ್ಲಿ ಹಾಗೂ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮ ಮಾರ್ಚ್ 3 ರಂದು ಬೆಳಿಗ್ಗೆ 11 ಗಂಟೆಗೆ ಹಾವೇರಿ ನಗರದ ಗಾಂಧಿ ಭವನದಲ್ಲಿ ಆಚರಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಈ ಎರಡು ಜಯಂತಿ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ, ಆಸನ ವ್ಯವಸ್ಥೆ, ಉಪನ್ಯಾಸಕರ ನೇಮಕ, ಉಪಹಾರ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಅವರು ಜಯಂತಿ ಆಚರಣೆ ಕುರಿತು ಸರ್ಕಾರದ ಮಾರ್ಗಸೂಚಿಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 