ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ ಸಿದ್ಧತೆಗೆ ಸೂಚನೆ : ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ

Instructions for preparation of meaningful Republic Day celebrations: District Collector K. Lakshmi

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ ಸಿದ್ಧತೆಗೆ ಸೂಚನೆ : ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ 

ಕಾರವಾರ 05: ಜನವರಿ 26ರಂದು ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜರುಗುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾಸೂಚಿಸಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಅಭಿನಂದಿಸಲು ಸಾಧಕರ ಪಟ್ಟಿಯನ್ನು ಸಾಕಷ್ಟು ಮುಂಚಿತವಾಗಿ ನೀಡುವಂತೆ ಇಲಾಖಾಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮದ ಯಾವುದೇ ಸಂದರ್ಭದಲ್ಲಿ ಶಿಷ್ಠಾಚಾರದ ಉಲ್ಲಂಘನೆ ಆಗದಂತೆ ಎಲ್ಲಾ ಅಧಿಕಾರಿಗಳು ಎಚ್ಚರ ವಹಿಸುವಂತೆ ಸೂಚಿಸಿದರು. 

ಗಣರಾಜ್ಯೋತ್ಸವ ಕಾರ್ಯಕ್ರಮದ ಕುರಿತು ಆಹ್ವಾನ ಪತ್ರಿಕೆಗಳನ್ನು ಶಿಷ್ಠಾಚಾರದಂತೆ ಮುದ್ರಿಸಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ತಲುಪಿಸಬೇಕು. ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ, ಅರಣ್ಯ, ಎನ್‌.ಸಿ.ಸಿ., ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡಗಳಿಂದ ಆಕರ್ಷಕ ಪಥ ಸಂಚಲನ ಏರಿ​‍್ಡಸುವಂತೆ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವ ನಿಟ್ಟಿನಲ್ಲಿ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಸಮಿತಿಯ ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತು ಸಮನ್ವಯದಿಂದ ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.