ಅನುದಾನದ ಸದ್ಬಳಕೆ, ಗುಣಮಟ್ಟದ ಸೇವೆ ಹಾಗೂ ಕಟ್ಟುನಿಟ್ಟಿನ ಮೇಲ್ವಿಚಾರಣೆಗೆ ಸೂಚನೆ
Instructions issued for the optimal use of grants, quality service, and strict supervision
ಲೋಕದರ್ಶನ ವರದಿ
ಗದಗ 18: ಸರ್ಕಾರದಿಂದ ಬಿಡುಗಡೆಯಾಗುವ ಪ್ರತಿಯೊಂದು ರೂಪಾಯಿ ಸಾರ್ವಜನಿಕರ ಹಿತಕ್ಕಾಗಿ ಸಮರ್ಕವಾಗಿ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅನುದಾನ ದುರ್ಬಳಕೆಯಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಯೋಜನೆಗಳ ಸೌಲಭ್ಯಗಳು ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ವಹಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚಿಸಿದರು.
ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ನಲ್ಲಿ ಗುರುವಾರ ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಜಿಲ್ಲಾ ಪಂಚಾಯಿತಿ ಅನುದಾನದ ಕ್ರಿಯಾ ಯೋಜನೆ, ಜಿಲ್ಲಾ ವಲಯದ ಅನುದಾನ ಹಂಚಿಕೆ ಹಾಗೂ ವಿವಿಧ ಇಲಾಖೆಗಳ ಯೋಜನೆಗಳಿಗೆ ಅನುಮೋದನೆ ನೀಡಿದರು. ಜಿಲ್ಲಾ ಪಂಚಾಯಿತಿಯಲ್ಲಿ ಶೇ.60ರಷ್ಟು ಅನುದಾನವನ್ನು ವೇತನಕ್ಕಾಗಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ನೀಡುವ ಅನುದಾನದಲ್ಲಿ ಶೇ.95ರಷ್ಟು ಮೊತ್ತವನ್ನು ವೇತನಕ್ಕಾಗಿ ಮೀಸಲಿಡುವ ಕುರಿತು ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು. ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಸವಿಸ್ತಾರವಾಗಿ ಪರೀಶೀಲನೆ ನಡೆಸಿ, ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 