ಭೋವಿ ಸಮುದಾಯದ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ
Instructions issued for the speedy implementation of schemes for the Bhovi community
ವಿಜಯಪುರ, ಸೆ.7: ಭೋವಿ ಸಮುದಾಯದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ನಿಗದಿತ ಅವಧಿಯಲ್ಲಿ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಮಪ್ಪ ಎಂ. ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸ್ವಯಂ ಉದ್ಯೋಗ ನೇರ ಸಾಲ, ಕುರಿ-ಮೇಕೆ ಸಾಕಾಣಿಕೆ, ಉದ್ಯಮಶೀಲತಾ ಅಭಿವೃದ್ಧಿ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನವನ್ನು ಪರೀಶೀಲಿಸಿದರು.
ಬ್ಯಾಂಕ್‌ಗಳಲ್ಲಿ ಫಲಾನುಭವಿಗಳ ಅರ್ಜಿಗಳನ್ನು ವಿಳಂಬ ಮಾಡದೆ ಪರೀಶೀಲಿಸಿ ಸಾಲ ಸೌಲಭ್ಯ ಒದಗಿಸಬೇಕು. ಸಿಬಿಲ್ ಸ್ಕೋರ್ ಅಥವಾ ಶ್ಯೂರಿಟಿ ಕಾರಣದಿಂದ ಅರ್ಹ ಫಲಾನುಭವಿಗಳಿಗೆ ಅನಗತ್ಯ ತೊಂದರೆ ನೀಡಬಾರದು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಮಳೆಗಾಲಕ್ಕೂ ಮುನ್ನ ಕೊಳವೆಬಾವಿ ಕೊರೆಸಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಮಹಿಳಾ ಸಂಘಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಸಮುದಾಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದರು.
ಭೋವಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಶಾಲೆ ಬಿಟ್ಟ ಮಕ್ಕಳ ಮಾಹಿತಿ ಸಂಗ್ರಹಿಸಿ ಅವರನ್ನು ಮತ್ತೆ ಶಿಕ್ಷಣದತ್ತ ಕರೆತರಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಶಿಕ್ಷಣ ಮತ್ತು ವಸತಿ ನಿಲಯಕ್ಕೆ ಸಂಬಂಧಿಸಿದ ವ್ಯವಸ್ಥೆಗಳ ಕುರಿತು ಈ ತಿಂಗಳ ಅಂತ್ಯದೊಳಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಜಾತಿ ಪ್ರಮಾಣಪತ್ರದ ದುರುಪಯೋಗ ತಡೆಯಲು ಅಧಿಕೃತ ದಾಖಲೆಗಳ ಆಧಾರದ ಮೇಲೆ ಪ್ರಮಾಣಪತ್ರ ನೀಡಬೇಕು. ಅರ್ಹ ಫಲಾನುಭವಿಗಳ ಬಾಕಿ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಡಾ. ಉದ್ರಾಮ, ಡಿವೈಎಸ್ಪಿ ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಭೋವಿ ಸಮುದಾಯದ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 