ಬಾಲ್ಯ ವಿವಾಹ, ಶಾಲೆ ಬಿಟ್ಟ ಮಕ್ಕಳ ಕುರಿತು ವಿಶೇಷ ನಿಗಾ ವಹಿಸಲು ಸೂಚನೆ
Instructions issued to pay special attention to child marriage and school dropouts.
ಹೊಸಪೇಟೆ 3: ನಗರದ ಪ್ರಮುಖ ರಸ್ತೆ, ಜಂಕ್ಷನ್ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ ನಡೆಸುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅಂತಹ ಮಕ್ಕಳನ್ನು ತಕ್ಷಣ ರಕ್ಷಿಸಿ ಬಾಲ ಮಂದಿರ ಅಥವಾ ನಿರಾಶ್ರಿತರ ಕೇಂದ್ರಗಳಿಗೆ ದಾಖಲಿಸಬೇಕು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಕೆ.ಎಂ. ರಾಜಶೇಖರ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಮಕ್ಕಳ ಭಿಕ್ಷಾಟನೆ ಕಂಡುಬಂದರೆ 1098 (ಚೈಲ್ಡ್ ಹೆಲ್ಪ್ಲೈನ್) ಅಥವಾ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಬಾಲ್ಯ ವಿವಾಹ ತಡೆಗೆ ಜಂಟಿ ಕಾರ್ಯಾಚರಣೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಬಾಲ್ಯ ವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಶಾಲೆಗಳು, ಕಲ್ಯಾಣ ಮಂಟಪಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮಗಳು ಮತ್ತು ಪೋಕ್ಸೋ ಕಾಯ್ದೆ ಕುರಿತು ವ್ಯಾಪಕ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 