ನಿಗಧಿತ ಕಾಲಾವಧಿಯೊಳಗೆ ಯೋಜನೆಗಳ ಗುರಿ ಸಾಧನೆಗೆ ಸೂಚನೆ: ಜಿಲ್ಲಾಧಿಕಾರಿ ಡಾ. ದಾನಮ್ಮನವರ

ನಿಗಧಿತ ಕಾಲಾವಧಿಯೊಳಗೆ ಯೋಜನೆಗಳ ಗುರಿ ಸಾಧನೆಗೆ ಸೂಚನೆ: ಜಿಲ್ಲಾಧಿಕಾರಿ ಡಾ. ದಾನಮ್ಮನವರ Instructions to achieve the targets of the projects within the stipulated time frame: DC Dr. Danamma

ಹಾವೇರಿ 01 : ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿಯಲ್ಲಿ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಪ್ರಸಕ್ತ ಸಾಲಿಗೆ ಕ್ರಿಯಾಯೋಜನೆ ತಯಾರಿಸಿಕೊಂಡು ನಿಗಧಿತ ಕಾಲಮಿತಿಯೋಜನೆಗಳ ನಿಗಧಿತ ಗುರಿ ಸಾಧನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.   

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿಯಲ್ಲಿ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರೀಶೀಲನಾ ಸಭೆ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಹಾಗೂ ಇನ್ ಸ್ಯಾನಿಟರಿ ಲ್ಯಾಟ್ರಿನ್ಸ್‌ ಮತ್ತು ಸಫಾಯಿ ಕರ್ಮಚಾರಿಗಳ ಕುರಿತಾದ ಜಿಲ್ಲಾ ಮಟ್ಟದ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ನಿಗಧಿತ ಯೋಜನೆಗಳ ಸಮರ​‍್ಕ ಅನುಷ್ಠಾನಗೊಳಿಸಬೇಕು  ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯಗಳನ್ನು ತಲುಪಿಸಬೇಕು. ಯೋಜನೆಗಳ ಅನುಷ್ಠಾನವನ್ನು ವಿಳಂಬ ಮಾಡಬಾರದು. ಆಯಾ ಸಾಲಿನ ಅನುದಾನವನ್ನು ಆಯಾ ಸಾಲಿನಲ್ಲೆ ವೆಚ್ಚ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಜಿಲ್ಲೆಯಲ್ಲಿ ಸಮೀಕ್ಷೆಯಲ್ಲಿ ಗುರುತಿಸಲಾದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಹಾಗೂ ಪೌರ ಕಾರ್ಮಿಕರಿಗೆ ವಿವಿಧ  ವಸತಿ ಯೋಜನೆಗಡಿ ವಸತಿ ಸೌಲಭ್ಯ, ಸಹಾಯಧನ- ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನಳಲ್ಲಿ ಆಯ್ಕೆಗೆ ಆದ್ಯತೆ ನೀಡಿಬೇಕು.  ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಪೌರಕಾರ್ಮಿಕರ ವೇತನ ವಿಳಂವಾಗುತ್ತಿದ್ದು, ಇದರಿಂದ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ ಹಾಗಾಗಿ ಪ್ರತಿ ಮಾಹೆ ವೇತನ ಪಾವತಿಸುವಂತೆ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೌರಕಾರ್ಮಿಕರ ಕುಂದುಕೊರತೆ ಸಭೆ ಆಯೋಜನೆ ಮಾಡುವಂತೆ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಹಾಗೂ ಇನ್ ಸ್ಯಾನಿಟರಿ ಲ್ಯಾಟ್ರಿನ್ಸ್‌ ಮತ್ತು ಸಫಾಯಿ ಕರ್ಮಚಾರಿಗಳ ಕುರಿತಾದ ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಸುಭಾಸ ಬೆಂಗಳೂರು,  ಭೀಮಪ್ಪ ಯಲ್ಲಾಪೂರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. 

ಪೌರಕಾರ್ಮಿಕರಿಗೆ ಪ್ರತಿ ಮಾಹೆ ವೇತನ ಪಾವತಿಗೆ ಕ್ರಮವಹಿಸುವಂತೆ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.  

ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಪ್ರಶಾಂತ ವರಗಪ್ಪನವರ ಅವರು ಮಾತನಾಡಿ,  ದಿನಾಂಕ 1-04-2024 ರಿಂದ 28-02-2025ರವರೆಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯಡಿ 66.68 ರಷ್ಟು ಸಾಧನೆ ಮಾಡಲಾಗಿದೆ. ಅದೇ ರೀತಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಹಾಗೂ ಪೌರ ಕಾರ್ಮಿಕರಿಗೆ ಡಾ.ಬಿ.ಆರ್‌.ಅಂಬೇಡ್ಕರ್,  ಪಿ.ಎಂ.ಎ.ವೈ. ಹಾಗೂ ಜಿ+1 ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ  ಮನೆ ಹಂಚಿಕೆ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.  

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ರುಚಿ ಬಿಂದಲ್, ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.