ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ
Instructions to celebrate the birth anniversaries of eminent personalities in a meaningful way
ಲೋಕದರ್ಶನ ವರದಿ
ವಿಜಯಪುರ 15: ಜಿಲ್ಲೆಯಲ್ಲಿ ಮುಂಬರುವ ಜೂನ್ 27-ನಾಡಪ್ರಭು ಕೆಂಪೇಗೌಡ ಜಯಂತಿ, ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಹಾಗೂ ಜುಲೈ 02 ರಂದು ಡಾ. ಫ.ಗು. ಹಳಕಟ್ಟಿ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದೆ, ಅತ್ಯಂತ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು. ಜಯಂತಿ ಕಾರ್ಯಕ್ರಮಗಳ ಯಶಸ್ವಿ ಆಯೋಜನೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ವಹಿಸಲಾಗಿರುವ ಜವಾಬ್ದಾರಿಗಳನ್ನು ಎಲ್ಲರೂ ಸಮರ್ಕವಾಗಿ ನಿರ್ವಹಿಸಬೇಕು. ಕಾರ್ಯಕ್ರಮಗಳ ನಿಮಿತ್ತ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮುಂಚಿತವಾಗಿಯೇ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜೂನ್ 27- ನಾಡಪ್ರಭು ಕೆಂಪೇಗೌಡ ಜಯಂತಿ, ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮದೊಂದಿಗೆ ಆಚರಿಸಲಾಗುವುದು. ಜುಲೈ 02-ಡಾ. ಫ.ಗು. ಹಳಕಟ್ಟಿ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉಪನ್ಯಾಸ ಕಾರ್ಯಕ್ರಮದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗುವುದು. ಜುಲೈ 29- ಹಡಪದ ಅಪ್ಪಣ್ಣ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ವಿವರಿಸಿದರು.
ಈ ಪೂರ್ವಭಾವಿ ಸಭೆಯಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣನವರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಎಸ್. ಅಶೋಕಕುಮಾರ, ಎಸ್.ಜಿ. ಸುರಪುರ, ಎ.ಬಿ. ಅಂಕದ, ಗೀರೀಶ ಕುಲಕರ್ಣಿ, ದೇವೇಂದ್ರ ಮೆರೇಕರ, ಡಾ. ಎಂ.ಆರ್. ಗುರಿಕರ, ವಿದ್ಯಾವತಿ ಅಂಕಲಗಿ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 