ಮರಣ ಹೊಂದಿದ ಹಾಗೂ ಅನರ್ಹ ಫಲಾನುಭವಿಗಳ ಮಾಹಿತಿ ಪರೀಶೀಲನೆಗೆ ಅಧಿಕಾರಿಗಳಿಗೆ ನಿರ್ದೇಶನ
Instructions to officials to verify information of deceased and ineligible beneficiaries
ಲೋಕದರ್ಶನ ವರದಿ
ಹಾವೇರಿ 30: ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಮರಣ ಹೊಂದಿದ ಹಾಗೂ ಅನರ್ಹ ಫಲಾನುಭವಿಗಳ ಹೆಸರಲ್ಲಿ ಸೌಲಭ್ಯ ಮುಂದುವರಿದಿರುವ ಕುರಿತು ದೂರುಗಳು ಬಂದಿದ್ದು, ಅವುಗಳನ್ನು ಸಮಗ್ರವಾಗಿ ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಆರಂಭದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಸಹಜವಾಗಿದ್ದು, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 