ಮರಣ ಹೊಂದಿದ ಹಾಗೂ ಅನರ್ಹ ಫಲಾನುಭವಿಗಳ ಮಾಹಿತಿ ಪರೀಶೀಲನೆಗೆ ಅಧಿಕಾರಿಗಳಿಗೆ ನಿರ್ದೇಶನ

ಮರಣ ಹೊಂದಿದ ಹಾಗೂ ಅನರ್ಹ ಫಲಾನುಭವಿಗಳ ಮಾಹಿತಿ ಪರೀಶೀಲನೆಗೆ ಅಧಿಕಾರಿಗಳಿಗೆ ನಿರ್ದೇಶನ Instructions to officials to verify information of deceased and ineligible beneficiaries

ಲೋಕದರ್ಶನ ವರದಿ 

 ಹಾವೇರಿ 30: ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್‌.ಆರ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.  

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಮರಣ ಹೊಂದಿದ ಹಾಗೂ ಅನರ್ಹ ಫಲಾನುಭವಿಗಳ ಹೆಸರಲ್ಲಿ ಸೌಲಭ್ಯ ಮುಂದುವರಿದಿರುವ ಕುರಿತು ದೂರುಗಳು ಬಂದಿದ್ದು, ಅವುಗಳನ್ನು ಸಮಗ್ರವಾಗಿ ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.  

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಆರಂಭದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಸಹಜವಾಗಿದ್ದು, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.