ಗ್ರಾಮೀಣ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡುವ ವಿಮಾ ಯೋಜನೆ
Insurance scheme to provide financial security to rural families
ಲೋಕದರ್ಶನ ವರದಿ
ದೇವರ ಹಿಪ್ಪರಗಿ 18: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸಾಮಾಜಿಕ ಭದ್ರತಾ ವಿಮಾ ಯೋಜನೆಗಳು ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪಾಲಿಗೆ ಸಂಕಷ್ಟದ ಸಮಯದಲ್ಲಿ ನಿಜವಾದ ಆಪದ್ಬಾಂಧವನಂತೆ ಆಸರೆಯಾಗುತ್ತವೆ ಎಂದು ಕರ್ಣಾಟಕ ಬ್ಯಾಂಕ್ ಕಲಬುರಗಿ ವಲಯದ ಸಹಾಯಕ ಮಹಾಪ್ರಬಂಧಕರಾದ ಮಲ್ಲನಗೌಡ ಬಿರಾದಾರ ಹೇಳಿದರು. ಪಟ್ಟಣದ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಿಎಮಜೆಜೆವಾಯ ಹಾಗೂ ಪಿಎಮೆಎಸ್‌ಬಿವಾಯ್ ಫಲಾನುಭವಿಗೆ ರೂ. 4 ಲಕ್ಷ ಮೊತ್ತದ ವಿಮಾ ಪರಿಹಾರದ ಚೆಕ್ ವಿತರಿಸಿ ಮಾತನಾಡಿದ ಅವರು "ಬ್ಯಾಂಕಿಂಗ್ ವ್ಯವಹಾರಗಳು ಕೇವಲ ಠೇವಣಿ ಮತ್ತು ಸಾಲಕ್ಕೆ ಸೀಮಿತವಾಗದೇ ಸಾರ್ವಜನಿಕರ ಜೀವಕ್ಕೆ ಆರ್ಥಿಕ ಭದ್ರತೆ ನೀಡುವುದು ನಮ್ಮ ಆದ್ಯತೆಯಾಗಿದೆ. ಸರ್ಕಾರ ಜಾರಿಗೆ ತಂದಿರುವ ಅತ್ಯಂತ ಕಡಿಮೆ ವೆಚ್ಚದ ಈ ವಿಮಾ ಯೋಜನೆಗಳು ಅನೀರೀಕ್ಷಿತ ದುರ್ಘಟನೆಗಳು ಸಂಭವಿಸಿದಾಗ ಕುಟುಂಬವನ್ನು ಆರ್ಥಿಕ ದಿವಾಳಿತನದಿಂದ ರಕ್ಷಿಸುತ್ತವೆ. ಪ್ರತಿಯೊಬ್ಬ ನಾಗರಿಕರು, ವಿಶೇಷವಾಗಿ ಗ್ರಾಮೀಣ ಭಾಗದ ಶ್ರಮಿಕ ವರ್ಗದವರು ಕಡ್ಡಾಯವಾಗಿ ಈ ವಿಮಾ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 