ಬೌದ್ಧಿಕ ಜ್ಞಾನವೇ ಶ್ರೇಷ್ಠ ಸಂಪತ್ತು: ಸುನೀಲಗೌಡ ಪಾಟೀಲ
Intellectual knowledge is the greatest wealth: Sunilagouda Patil
ವಿಜಯಪುರ 19: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಭೌತಿಕ ಆಸ್ತಿಗಿಂತ ಬೌದ್ಧಿಕ ಜ್ಞಾನವೇ ಶ್ರೇಷ್ಠ ಸಂಪತ್ತಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭೋತ್ಸವ 2025-26 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಧನೆಗೆ ಶಿಕ್ಷಣ ಅತ್ಯಗತ್ಯ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬಿ.ಎಲ್.ಡಿ.ಇ ಸಂಸ್ಥೆಯಿಂದ ನೀಟ್, ಜೆಇಇ, ಸಿಇಟಿ, ಕೆಸಿಇಟಿ, ನಾಟಾ ಹಾಗೂ ಕ್ಲ್ಯಾಟ್ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
ವಚನಪಿತಾಮಹ ಡಾ. ಫ.ಗು. ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಬಿ.ಎಂ. ಪಾಟೀಲ, ಬಂಗಾರಮ್ಮ ಸಜ್ಜನ ಸೇರಿದಂತೆ ಹಲವು ಮಹನೀಯರು ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಕೊಡುಗೆಯನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದರು. ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಕೆಜಿಯಿಂದ ಪಿಜಿವರೆಗೆ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜು ದೇಶದ ಅತ್ಯುತ್ತಮ ಕಾಲೇಜುಗಳ ಪೈಕಿ ನಾಲ್ಕನೇ ಸ್ಥಾನ ಪಡೆದಿದ್ದು, ದೇವರಹಿಪ್ಪರಗಿ ಹಾಗೂ ಬಸವನಬಾಗೇವಾಡಿಯಲ್ಲಿ ಸಿಬಿಎಸ್‌ಇ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ವಿ. ಉಪ್ಪಾರ ಮಾತನಾಡಿ, ಪ್ರತಿಭೆಯನ್ನು ಗುರುತಿಸಿದಾಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ. ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ಭರವಸೆ ನೀಡುತ್ತದೆ ಎಂದರು.
ಎಸ್.ಎಸ್. ಆವರಣದ ಆಡಳಿತಾಧಿಕಾರಿ ಪ್ರೊ. ಐ.ಎಸ್. ಕಾಳಪ್ಪನವರ ಮಾತನಾಡಿ, 109 ವರ್ಷಗಳ ಇತಿಹಾಸ ಹೊಂದಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶಿಕ್ಷಣ ಸೇವೆ ಶ್ಲಾಘನೀಯವಾಗಿದೆ ಎಂದರು. ಈ ಸಂದರ್ಭದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದ ಸಾನಿಕಾ ಮೆಟಗಾರ, ಅಕ್ಷತಾ ಚವ್ಹಾಣ, ಯುವರಾಜ ಬಗಲಿ ಸೇರಿದಂತೆ ಹಲವು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಾಲಗಾಂವ ಗುರುದೇವಾಶ್ರಮದ ಡಾ. ಅಮೃತಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆ ಶಾಖಾಧಿಕಾರಿ ಪ್ರಕಾಶ ಗೊಂಗಡಿ, ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸಂಗನಬಸಪ್ಪ ಸಜ್ಜನ, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 