ಮಳೆಗಾಲದಲ್ಲೂ ಬಿಸಿಲಿನ ಅಬ್ಬರ; ತುಂಗಭದ್ರಾ ನದಿಯಲ್ಲಿ ಪ್ರವಾಹ ಭೀತಿ, ಬೆಳೆಗಳಿಗೆ ಹಾನಿ
Intense heat despite the monsoon; fear of floods in the Tungabhadra River, damage to crops
ಹೂವಿನಹಡಗಲಿ, ಆ. 4: ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಗೆ ನೀರಿನ ಹರಿವು ಹೆಚ್ಚಿದ್ದು, ಹೂವಿನಹಡಗಲಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸಿಂಗಟಾಳೂರು ಬ್ಯಾರೇಜ್ನಿಂದ ಕಳೆದ ಎರಡು ದಿನಗಳಿಂದ ಸುಮಾರು 90,500 ಕ್ಯೂಸೆಕ್ ನೀರನ್ನು ತುಂಗಭದ್ರಾ ನದಿಗೆ ಹರಿಸಲಾಗುತ್ತಿದೆ.
ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹೂವಿನಹಡಗಲಿ ಭಾಗದಲ್ಲಿ ಮಳೆ ಇಲ್ಲದಿದ್ದರೂ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿ ತೀರದ ಗ್ರಾಮಗಳ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ನದಿ ತೀರದ ಕೃಷಿಭೂಮಿಗಳಲ್ಲಿ ಬೆಳೆದಿದ್ದ ಭತ್ತ, ಸೂರ್ಯಕಾಂತಿ, ಮೆಕ್ಕೆಜೋಳ, ಹೈಬ್ರಿಡ್ ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಬನ್ನಿಮಟ್ಟಿ, ನಂದಿಗಾವಿ ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯ ಸುಮಾರು 100 ಎಕರೆ ಪ್ರದೇಶದ ಬೆಳೆಗಳು ಜಲಾವೃತವಾಗಿವೆ.
ಅದರಲ್ಲೂ ಸುಮಾರು 30 ಎಕರೆ ಚೆಂಡುಹೂ, 25 ಎಕರೆ ಮೆಕ್ಕೆಜೋಳ, 5 ಎಕರೆ ಚೌಳಿ ಹಾಗೂ 10 ಎಕರೆ ಭತ್ತದ ಬೆಳೆ ನೀರಿನಲ್ಲಿ ಮುಳುಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚೆಂಡುಹೂ ಸಂಪೂರ್ಣ ಹಾಳಾಗುವ ಭೀತಿಯಿಂದ ರೈತರು ಪ್ರವಾಹದ ನೀರಿನಲ್ಲೇ ಹೂ ಕಟಾವು ಮಾಡುತ್ತಿರುವ ದೃಶ್ಯ ಕಂಡುಬಂದಿದೆ.
ಹಠಾತ್ ನೀರಿನ ಹರಿವಿನಿಂದ 20ಕ್ಕೂ ಹೆಚ್ಚು ಮೋಟಾರ್ ಪಂಪ್ಸೆಟ್ಗಳು ನೀರಿನಲ್ಲಿ ಮುಳುಗಿದ್ದು, ಸಾಕಷ್ಟು ಪ್ಲಾಸ್ಟಿಕ್ ಪೈಪ್ಗಳೂ ಕೊಚ್ಚಿಕೊಂಡು ಹೋಗಿವೆ. ಪ್ರತಿ ವರ್ಷ ಇದೇ ರೀತಿಯ ಪ್ರವಾಹದಿಂದ ಬೆಳೆ ಹಾನಿಯಾಗುತ್ತಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವರದಿ ಸಂಗ್ರಹಿಸಿದರೂ ಸಮರ್ಕ ಪರಿಹಾರ ದೊರೆಯುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್, ಬನ್ನಿಮಟ್ಟಿ, ನಂದಿಗಾವಿ ಸೇರಿದಂತೆ ಪ್ರವಾಹಪೀಡಿತ ಪ್ರದೇಶಗಳಿಗೆ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಭೇಟಿ ನೀಡಿ ಪರೀಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಬೆಳೆ ನಷ್ಟದ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 