ರೋಣ ಹಾಗೂ ಗಜೇಂದ್ರಗಡ ತಾಲೂಕಿನಲ್ಲಿ ವಿಬಿ-ಜಿ ರಾಮ್ (ಜಿ) ಭರದ ಸಿದ್ಧತೆ ದಿನಕ್ಕೆ 382 ಕೂಲಿ , 125 ದಿನ ಉದ್ಯೋಗ ಖಾತರಿ
Intensive preparations are underway for the VB-G Ram (G) scheme in Rona and Gajendragad taluks, offe
ಗ್ರಾಮೀಣ ಜನರಿಗೆ ನಿಮ್ಮ ಗ್ರಾಮದಲ್ಲೇ ಕೆಲಸ ಗ್ಯಾರಂಟಿ
ರೋಣ :- ಮಳೆ ಕೈಕೊಟ್ಟರೆ ಕೆಲಸಕ್ಕಾಗಿ ಊರು ಬಿಟ್ಟು ಹೊರಡಬೇಕಾಗಿದ್ದ ಗ್ರಾಮೀಣ ಕೂಲಿಕಾರರಿಗೆ ಈಗ ಹೊಸ ಆಶಾಕಿರಣ ಮೂಡಿದೆ. ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ (ಜಿ) ಯೋಜನೆ ಅನುಷ್ಠಾನಕ್ಕೆ ರೋಣ ಹಾಗೂ ಗಜೇಂದ್ರಗಡ ತಾಲೂಕಿನಲ್ಲಿ ಸಿದ್ಧತೆಗಳು ವೇಗ ಪಡೆದುಕೊಂಡಿವೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಕಾಯಿದೆಯ ಬದಲಿಗೆ ಜಾರಿಗೆ ಬಂದಿರುವ ಈ ಯೋಜನೆಯಡಿ ದಿನಕ್ಕೆ ?382 ಕೂಲಿ ನಿಗದಿಯಾಗಿದ್ದು, ಅರ್ಹ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಕೌಶಲರಹಿತ ಉದ್ಯೋಗ ಖಾತರಿ ನೀಡಲಾಗುತ್ತಿದೆ.
ಈ ವರ್ಷ ಮುಂಗಾರು ನೀರೀಕ್ಷೆಯಂತೆ ಆರಂಭವಾಗದ ಕಾರಣ ಹಲವು ಗ್ರಾಮಗಳಲ್ಲಿ ಕೃಷಿ ಚಟುವಟಿಕೆಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿಲ್ಲಾ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗದ ಅವಕಾಶ ಕಲ್ಪಿಸುವ ಯೋಜನೆಗೆ ಹೆಚ್ಚಿನ ಮಹತ್ವ ಬಂದಿದೆ. ಕೃಷಿ ಕೆಲಸವಿಲ್ಲದ ಅವಧಿಯಲ್ಲಿ ಕುಟುಂಬಗಳ ಆದಾಯಕ್ಕೆ ಆಸರೆಯಾಗಲಿದೆ ಎಂಬ ನೀರೀಕ್ಷೆ ಕೂಲಿಕಾರರಲ್ಲಿ ಮೂಡಿದೆ. ಯೋಜನೆಯ ಆರಂಭಿಕ ಹಂತದಲ್ಲಿ ಈಗಾಗಲೇ ಇ-ಕೆವೈಸಿ ಪೂರ್ಣಗೊಳಿಸಿರುವ ಹಳೆಯ ನರೇಗಾ ಜಾಬ್ ಕಾರ್ಡ್ಗಳನ್ನೇ ಮಾನ್ಯಗೊಳಿಸಿ ಕೆಲಸ ನೀಡಲಾಗುತ್ತದೆ.
ಇದರಿಂದ ಹೊಸ ಕಾರ್ಡ್ಗಾಗಿ ಕಾಯಬೇಕಾದ ಅಗತ್ಯ ಇರುವುದಿಲ್ಲ. ನಂತರ ಹಂತ ಹಂತವಾಗಿ ಎಲ್ಲ ಅರ್ಹ ಕುಟುಂಬಗಳಿಗೆ ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್ ವಿತರಿಸಲಾಗುತ್ತದೆ. ಈವರೆಗೆ ಯಾವುದೇ ಯೋಜನೆಯಲ್ಲಿ ಹೆಸರು ನೋಂದಾಯಿಸದ ಗ್ರಾಮೀಣ ಕುಟುಂಬಗಳಿಗೂ ಹೊಸದಾಗಿ ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ.ಎರಡು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದ್ದು, ಗ್ರಾಮ ಸಭೆಗಳ ಮೂಲಕ ಕಾಮಗಾರಿಗಳ ಕ್ರಿಯಾ ಯೋಜನೆ ರೂಪಿಸುವ ಕಾರ್ಯ ಪ್ರಗತಿಯಲ್ಲಿದೆ.
ಜಲ ಸಂರಕ್ಷಣೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಜೀವನೋಪಾಯ ವೃದ್ಧಿ ಹಾಗೂ ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ.ಹೊಸ ಯೋಜನೆಯಲ್ಲಿ ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೆಲಸದ ಸ್ಥಳಗಳಲ್ಲಿ ಫೇಸ್ ಅಥೆಂಟಿಕೇಶನ್ ಮೂಲಕವೇ ಹಾಜರಾತಿ ದಾಖಲಿಸಲಾಗುತ್ತದೆ. ಜೊತೆಗೆ ಕಾರ್ಮಿಕರಿಗೆ ಸುರಕ್ಷಿತ ಕುಡಿಯುವ ನೀರು, ನೆರಳು, ವಿಶ್ರಾಂತಿ ಸೌಲಭ್ಯ ಹಾಗೂ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪರ್ಯಾಯ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಕೃಷಿ ಹಂಗಾಮಿನಲ್ಲಿ ರೈತರಿಗೆ ಕಾರ್ಮಿಕರ ಕೊರತೆ ಉಂಟಾಗದಂತೆ ಬಿತ್ತನೆ ಹಾಗೂ ಕೊಯ್ಲಿನ ಅವಧಿಯಲ್ಲಿ ಯೋಜನೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ವ್ಯವಸ್ಥೆ ಮಾಡಲಾಗಿದೆ. ಉಳಿದ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಮಗಾರಿಗಳನ್ನು ಆರಂಭಿಸುವ ಮೂಲಕ ಗ್ರಾಮೀಣ ಕುಟುಂಬಗಳಿಗೆ ನಿರಂತರ ಉದ್ಯೋಗ ಒದಗಿಸುವ ಗುರಿ ಹೊಂದಲಾಗಿದೆ. ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮನ್ವಯಗೊಳಿಸಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ."ವಿಬಿ-ಜಿ ರಾಮ್ (ಜಿ) ಯೋಜನೆ ಅನುಷ್ಠಾನಕ್ಕೆ ತಾಲೂಕು ಮಟ್ಟದಲ್ಲಿ ಅಗತ್ಯ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದು, ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಲು ಕ್ರಮವಹಿಸಲಾಗಿದೆ. ಯೋಜನೆಯ ಸೌಲಭ್ಯವನ್ನು ಎಲ್ಲ ಅರ್ಹ ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು,"
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 