ಅಂತರ್ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಪ್ಪಳ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ವಿಜೇತ
Inter-district level athletics meet: Athletes from Koppal Sports Hostel emerge winners
ಕೊಪ್ಪಳ 24: 2025-26ನೇ ಸಾಲಿನ ಕಲಬುರಗಿ ಜಿಲ್ಲೆಯಲ್ಲಿ ಜರುಗಿದ ಅಂತರ್ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಪ್ಪಳ ಜಿಲ್ಲೆಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ವಿಜೇತರಾಗಿದ್ದಾರೆ.
ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ರವರ ನಿರ್ದೇಶನದ ಮೇರೆಗೆ ರಾಜ್ಯಾದ್ಯಂತ ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾ ಕೌಶಲ್ಯ ತರಬೇತಿ, ಮೂಲ ಸೌಕರ್ಯ ಹಾಗೂ ಮಾರ್ಗದರ್ಶನ ಒದಗಿಸಲು ಕ್ರೀಡಾ ಅಭಿವೃದ್ಧಿಗೆ ಯುವ ಪ್ರತಿಭೆಗಳನ್ನು ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಬೆಳೆಸುವುದಕ್ಕೆ ಹಾಗೂ ಕ್ರೀಡಾಪಟುಗಳಲ್ಲಿ ಮನೋಭಾವವನ್ನು ಅಭಿವೃದ್ಧಿಪಡಿಸಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುತ್ತದೆ.
ಅದರನ್ವಯ, ಕೊಪ್ಪಳ ಜಿಲ್ಲೆಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಾದ ಭರತ್, ಶಂಕರ, ಆನಂದ, ಪ್ರಜ್ವಲ್, ವಿಜಯ, ಗೌತಮ್, ಅಭಿಶೇಕ, ಶಾಂತ್ ಕುಮಾರ್, ಸಂತೋಷ, ರವಿರಾಜ್, ಮೋಹನ್, ನಿರುಪಾದಿ, ಸಂಜಯ್, ಧನುಷ್, ಆಕಾಶ, ಸುಷ್ಮೀತಾ, ಸಂಜನಾ, ದೀಕ್ಷಾ, ಅಮೃತಾ ಕ್ರೀಡಾಪಟುಗಳು ಕಲಬುರಗಿ ಜಿಲ್ಲೆಯಲ್ಲಿ ಜರುಗಿದ ಅಂತರ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿಜೇತರಾಗಿರುತ್ತಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಅವರು ವಿಜೇತ ಕ್ರೀಡಾಪಟುಗಳಿಗೆ ಶುಭ ಕೋರಿ ಮುಂಬರುವ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ವಿಜೇತರಾಗಿ ಜಿಲ್ಲೆಗೆ ಕೀರ್ತಿ ತರಲೆಂದು ಹಾರೈಸಿದರು. ಈ ಸಂದರ್ಭದಲ್ಲಿ ಅಥ್ಲೆಟಿಕ್ಸ್ ತರಬೇತುದಾರರರಾದ ರೋಹಿಣಿ ಪರ್ವತೀಕರ ಹಾಗೂ ವಿಶ್ವನಾಥ ಕರ್ಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 