ಜೆಎಸ್‌ಎಸ್ ಸಿಬಿಎಸ್‌ಇ ಶಾಲೆಯಲ್ಲಿ ಆ.8ರಂದು ಅಂತರ್ಶಾಲಾ ಕೌಶಲ್ಯ ಮೇಳ
Inter-school Skill Fair at JSS CBSE School on August 8
ಲೋಕದರ್ಶನ ವರದಿ
ಧಾರವಾಡ, ಆ.6: ವಿದ್ಯಾಗಿರಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸಿಬಿಎಸ್‌ಇ ಶಾಲೆಯಲ್ಲಿ ಆಗಸ್ಟ್ 8, 2026ರಂದು ಬೆಳಿಗ್ಗೆ 8.30ಕ್ಕೆ ಹುಬ್ಬಳ್ಳಿ-ದಾರವಾಡ ಸಿಬಿಎಸ್‌ಇ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಅಂತರ್ಶಾಲಾ ಕೌಶಲ್ಯ ಮೇಳ ಹಾಗೂ ವಸ್ತು ಪ್ರದರ್ಶನ ಆಯೋಜಿಸಲಾಗಿದೆ.
ಮೇಳದಲ್ಲಿ ವಿದ್ಯಾರ್ಥಿಗಳು ಸೃಜನಶೀಲತೆ, ನವೀನತೆ ಹಾಗೂ ವೃತ್ತಿ ಕೌಶಲ್ಯಕ್ಕೆ ಸಂಬಂಧಿಸಿದ ತಮ್ಮ ಪ್ರತಿಭೆ ಮತ್ತು ಯೋಜನೆಗಳನ್ನು ಪ್ರದರ್ಶಿಸಲಿದ್ದು, ಒಟ್ಟು 16 ಸಿಬಿಎಸ್‌ಇ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಜೆಎಸ್‌ಎಸ್ನ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಉದ್ಘಾಟಿಸಲಿದ್ದು, ಮಾಜಿ ಎಫ್‌ಐಎಂಸಿ ಅಧ್ಯಕ್ಷೆ ಶ್ರೀಮತಿ ನಂದಿನಿ ಕಶ್ಯಪ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜೆಎಸ್‌ಎಸ್ ಆಡಳಿತಾಧಿಕಾರಿ ಶ್ರೀ ಅರಿಹಂತ ಪ್ರಸಾದ್ ಹಾಗೂ ಜೆಎಸ್‌ಎಸ್ ಐಟಿಐ ಕಾಲೇಜಿನ ಪ್ರಾಚಾರ್ಯ ಶ್ರೀ ಮಹಾವೀರ ಉಪಾಧ್ಯೆ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಕೃಷಿ ವಿಶ್ವವಿದ್ಯಾಲಯದ ಆಣ್ವಂಶಿಕ ಮತ್ತು ಸಸ್ಯ ತಳಿ ಅಭಿವೃದ್ಧಿ ವಿಭಾಗದ ಡಾ. ಜಯತೀರ್ಥ ದಿವಾನ್ ಹಾಗೂ ಕೆಎಚ್ಕೆಬಿ ತಾಂತ್ರಿಕ ಮಹಾವಿದ್ಯಾಲಯದ ಶಿವಾನಂದ ಶಂಭೋಜಿ ಭಾಗವಹಿಸಲಿದ್ದಾರೆ. ಶಾಲೆಯ ಪ್ರಾಚಾರ್ಯೆ ರಜನಿ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮೇಳದಲ್ಲಿ ವಿದ್ಯಾರ್ಥಿಗಳ ಪ್ರತಿಭೆ, ನವೀನ ಆಲೋಚನೆಗಳು ಹಾಗೂ ಕೌಶಲ್ಯಾಧಾರಿತ ಯೋಜನೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶ ಹೊಂದಿದ್ದು, ಸಾರ್ವಜನಿಕರು ಹಾಗೂ ಶಿಕ್ಷಣಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶಾಲೆಯ ಪ್ರಕಟಣೆ ತಿಳಿಸಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 