ಕ್ರಿಸ್ಮಸ್ ಅಂಗವಾಗಿ ಸರ್ವಧರ್ಮ ಸಹಮಿಲನ ಹಾಗೂ ಔತಣಕೂಟ
Interfaith gathering and banquet as part of Christmas
ಲೋಕದರ್ಶನ ವರದಿ
ವಿಜಯಪುರ 25: ಡಿ 22 ಕ್ರಿಸ್ಮಸ್ ಹಬ್ಬದ ಅಂಗವಾಗಿ ನಗರದ ಸಂಗಮ ಸಂಸ್ಥೆಯಲ್ಲಿ ಸರ್ವಧರ್ಮ ಸಹಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಜೊತೆಗೆ ವಿಶೇಷವಾಗಿ ಗೌರವಾನ್ವಿತ ಅಧಿಕಾರಿಗಳು, ಪತ್ರಕರ್ತರು, ನ್ಯಾಯವಾದಿಗಳು ಹಾಗೂ ವಿವಿಧ ಕ್ಷೇತ್ರಗಳ ಹಲವಾರು ಮುಖಂಡರಿಗೆ ಓತಣ ಕೂಟವನ್ನು ಹಮ್ಮಿಕೊಳ್ಳಲಾಯಿತು.
ಕ್ರಿಸ್ಮಸ್ ಎಂದರೆ ಕೇವಲ ಆಚರಣೆ ಅಲ್ಲ, ಅದು ಒಬ್ಬರಿಗೊಬ್ಬರು ಪ್ರೀತಿ ಹಂಚಿಕೊಳ್ಳುವ ಹಬ್ಬ ಸಮಾಜದಲ್ಲಿ ಶಾಂತಿ, ಸಮಾನತೆ ಮತ್ತು ಸಹೋದರತ್ವವನ್ನು ಬೆಳೆಸಲು ಅಂತರಧರ್ಮೀಯ ಒಗ್ಗಟ್ಟು ಅತ್ಯಗತ್ಯ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿರುವ ಸಂಗಮ ಸಂಸ್ಥೆಯ ನಿರ್ದೇಶಕರಾದ ಫಾದರ್ ಸಂತೋಷ ರವರು ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಸಂಗಮ ಸಂಸ್ಥೆಯ ಸಹನಿರ್ದೇಶಕರಾದ ಸಿಸ್ಟರ್ ಸಿಂತಿಯಾ ಡಿಮೆಲ್ಲೊ ರವರು ಬೈಬಲ್ ಪಠಣ ಮಾಡಿದರು. ನ್ಯಾಯವಾದಿ ಎಸ್. ಎಂ. ಕಾಚೂರ್ ರವರು ಕುರಾನ್ ಪಠಣ ಮಾಡಿದರು. ಇದೇ ವೇಳೆ ನ್ಯಾಯವಾದಿ ವಿನಾಯಕ ಬಡಗೇರ ರವರು ಭಗವದ್ಗೀತೆ ಪಠಣ ಮಾಡಿದರು.
ವಿವಿಧ ಧರ್ಮಗಳ ಪವಿತ್ರ ಗ್ರಂಥಗಳ ವಾಚನದ ಮೂಲಕ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶವನ್ನು ಕಾರ್ಯಕ್ರಮದಲ್ಲಿ ಸಾರಲಾಯಿತು. ಸಮಾಜದಲ್ಲಿ ಏಕತೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಈ ಸರ್ವಧರ್ಮ ಸಹಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲೋಯೊಲ ಶಾಲೆಯ ಪ್ರಾಂಶುಪಾಲರಾದ ಒಂದನೆಯ ಫಾದರ್ ವಿಶಾಲ ಹಾಗೂ ವಿತ್ತ ನಿರ್ವಹಣೆಗಾರರಾದ ಫಾದರ್ ಜೀವನ್‌ಡಿ’ಸೋಜ ಸಿಸ್ಟರ್ ವೀಣಾ ಮತ್ತು ಉಪಪ್ರಾಂಶುಪಾಲರಾದ ಸಿಸ್ಟರ್ ಸೋಪಿಯಾ ಸಂಗಮ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿಜಯಕುಮಾರ ಬಂಟನೂರ ನಿರೂಪಿಸಿದರು, ರಾಜೀವ ಕುರಿಮನಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 