ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
International Adoption Month program launched by District Collector
ಹಾವೇರಿ 30: ಪೋಷಕರು ಮಕ್ಕಳನ್ನು ಕಾನೂನು ಪ್ರಕಾರ ದತ್ತು ಪಡೆದುಕೊಳ್ಳಬೇಕು ಹಾಗೂ ದತ್ತು ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು.
ಜಿಲ್ಲಾಡಳಿತ ಸಂಕೀರ್ಣದ ಮುಂಭಾಗದಲ್ಲಿ ಗುರುವಾರ “ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಮಮತೆಯ ತೊಟ್ಟಿಲನೊಂದಿಗೆ ಟ್ರ್ಯಾಕ್ಟರ್ ಮೂಲಕ ಆಯೋಜಿಸಲಾದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಅವರು ಮಕ್ಕಳನ್ನು ದತ್ತು ಪಡೆಯುವ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಅವರು ಸ್ವಾಗತಿಸಿ, ದತ್ತು ಮಾಸಾಚರಣೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಮಕ್ಕಳ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ವಂದಿಸಿದರು.
ಟ್ರ್ಯಾಕ್ಟರ್‌ನಲ್ಲಿ ದೇವಗಿರಿ, ಮೆಡಿಕಲ್ ಕಾಲೇಜು, ಕೆರಿಮತ್ತಿಹಳ್ಳಿ ಪಿಜಿ ಸೆಂಟರ್, ಆಲದಕಟ್ಟಿ, ಹೊಸಳ್ಳಿ, ದೇವಿಹೊಸರ ಕ್ರಾಸ್ ಹಾಗೂ ಹಾವೇರಿ ಪ್ರಮುಖ ಬೀದಿಗಳಲ್ಲಿ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 