ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ
International Day Against Drug Abuse: Talikote
ತಾಳಿಕೋಟೆ 27: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋದಿ ದಿನವನ್ನು ತಾಳಿಕೋಟಿ ಪಟ್ಟಣದಲ್ಲಿ ಶ್ರೀ ಘನಮಠೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ಹಾಗೂ ದ್ವೀತಿಯ ವರ್ಷದ ಪ್ರ-ಶಿಕ್ಷಣಾರ್ಥಿಗಳು ಪ್ರಾಚಾರ್ಯರು ,ಶ್ರೀಮತಿ ಜಿ.ಎನ್.ಪಾಟೀಲ್ ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ವಿವಿದ ಶಾಲಾ/ ಕಾಲೇಜಗಳ ವಿದ್ಯಾರ್ಥಿಗಳು ಶರಣಮುತ್ಯಾ ದೇವಸ್ಥಾನದಿಂದ ಮಾದಕ ವಸ್ತುಗಳ ಸೇವನೇ ವಿರೋದಿ ಜಾಥಾವನ್ನು ಪ್ರಾರಂಬಿಸಿ ಕೆ.ಇ.ಬಿ ಹತ್ತಿರದಲ್ಲಿರುವ ಖಾಸ್ಗತೇಶ್ವರ ಸಭಾಭವನಕ್ಕೆ ಬಂದು ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಯಿತು ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಸ್.ಎಂ.ಸಜ್ಜನ ಅವರು ಮಾತನಾಡಿ ಮಾದಕ ವಸ್ತುಗಳು ಸಾಮಾನ್ಯವಾಗಿ ಆಲ್ಕೋಹಾಲ್, ತಂಬಾಕು, ಗಾಂಜಾ, ಕೊಕೇನ್, ಹೆರಾಯಿನ್ ಮುಂತಾದವುಗಳನ್ನು ಒಳಗೊಂಡಿವೆ.
ಇವುಗಳನ್ನು ಸೇವಿಸುವುದರಿಂದ ವ್ಯಕ್ತಿಯ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ವ್ಯಸನ ಉಂಟಾಗುತ್ತದೆ. ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯು ದೈಹಿಕ ಮತ್ತು ಮಾನಸಿಕವಾಗಿ ದುರ್ಬಲನಾಗುತ್ತಾನೆ. ಸಾಮಾಜಿಕ ಜೀವನದಲ್ಲಿಯೂ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಾದಕ ವಸ್ತುಗಳ ಬಳಕೆಯನ್ನು ತಪ್ಪಿಸಲು ಮತ್ತು ವ್ಯಸನದಿಂದ ಹೊರಬರಲು ಸಹಾಯ ಮಾಡುವ ಅನೇಕ ಮಾರ್ಗಗಳಿವೆ, ಈ ಕಾರ್ಯಕ್ರಮದಲ್ಲಿ ತಹಸೀಲ್ದಾರರಾದ ಶ್ರೀಮತಿ ವಿನಯಾ ಹೂಗಾರ ಮತ್ತು ದಂಢಾಧಿಕಾರಿಗಳಾದ ರಾಮನಗೌಡ ಸಂಕನಾಳ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 