ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ
International Day against Drug Abuse and Illicit Trafficking
ಲೋಕದರ್ಶನ ವರದಿ
ಹುಬ್ಬಳ್ಳಿ 24: ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿಯಲ್ಲಿ ಬೃಹತ್ ಜಾಗೃತಿ ಜಾಥಾವನ್ನು ಜಿಲ್ಲಾಧಿಕಾರಿ ಆರ್. ಸ್ನೇಹಲ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಎನ್. ಶಶಿಕುಮಾರ್, ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತ ಶ್ರುತಿ ಎನ್.ಎಸ್., ಸಹಾಯಕ ಪೊಲೀಸ್ ಆಯುಕ್ತರು, ಹುಬ್ಬಳ್ಳಿ, ಆಹಾರ ಸುರಕ್ಷತೆ ಮತ್ತು ಓಷಧ ಆಡಳಿತ ಇಲಾಖೆ, ಅಸಂಗಿ, ಅಜಯ್ ಮುದುಗಲ್, ನೀಲಿಮಾ, ಹಾಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ಗೋವಾ ವಲಯ ಇವರ ಸಂಯುಕ್ತ ನೇತೃತ್ವದಲ್ಲಿ, ಎಲ್ಲಾ ಓಷಧ ಶಾಸ್ತ್ರ ಮಹಾವಿದ್ಯಾಲಯಗಳು ಹಾಗೂ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ಸಹಯೋಗದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಜಾಥಾವು ಬೆಳಿಗ್ಗೆ 8.00 ಗಂಟೆಗೆ ತೋಳಂಕರೆ, ವಿದ್ಯಾನಗರ, ಹುಬ್ಬಳ್ಳಿಯಿಂದ ಆರಂಭಗೊಂಡು ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ, ಹುಬ್ಬಳ್ಳಿಯಲ್ಲಿ ಸಮಾರೋಪಗೊಂಡಿತು. ಈ ಜಾಥಾದಲ್ಲಿ ವಿವಿಧ ಓಷಧಶಾಸ್ತ್ರ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಆರೋಗ್ಯ ವೃತ್ತಿಪರರು, ಓಷಧ ವ್ಯಾಪಾರಿಗಳು, ಓಷಧ ನೀರೀಕ್ಷಕರು, ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಮಂದಿ ಉತ್ಸಾಹದಿಂದ ಭಾಗವಹಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 