ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೈಕ್ ರಾ್ಯಲಿಗೆ ಚಾಲನೆ
International Day of Democracy: Bike rally kicks off
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೈಕ್ ರಾ್ಯಲಿಗೆ ಚಾಲನೆ
ಕಾರವಾರ 14: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ, ಕಾರವಾರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬೆಂಗಳೂರಿನ ವರೆಗೆ ಸಂಚರಿಸುವ ಬೈಕ್ ರಾ್ಯಲಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಭಾನುವಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಓದಿ, ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು. ಪ್ರತಿಜ್ಞಾ ವಿಧಿಯನ್ನು ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ದೀಪನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಉಮೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ, ಬೈಕ್ ಯಾತ್ರೆ ಹೊರಟವರು, ಸ್ಥಳದಲ್ಲಿದ್ದ ಅಧಿಕಾರಿಗಳು, ಸಾರ್ವಜನಿಕರು ಸ್ವೀಕರಿಸಿದರು. ಸಮಾಜ ಕಲ್ಯಾಣ ಅಧಿಕಾರಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.
ಬೈಕ್ ಯಾತ್ರಿಗಳಿಗೆ ಹಸಿರು ನಿಶಾನೆ : ಉತ್ತರ ಕನ್ನಡ ಜಿಲ್ಲೆಯಿಂದ 10 ಮಂದಿ ಬೈಕ್ ರೈಡರ್ ಗಳು, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೋಮವಾರ ಕಾರವಾರ ದಿಂದ ಬೆಂಗಳೂರಿಗೆ ಯಾತ್ರೆ ಹೊರಟರು.ಈ ಯಾತ್ರೆಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ , ಎಸ್ಪಿ ದೀಪನ್ , ಅಪರ ಜಿಲ್ಲಾಧಿಕಾರಿ ಸಾಜಿದ್ ಹಸಿರು ನಿಶಾನೆ ತೋರಿದರು. ಬೆಂಗಳೂರುನಲ್ಲಿ ನಡೆಯುವ ಬೈಕ್ ರಾ್ಯಲಿಯಲ್ಲಿ ಭಾಗವಹಿಸಲು ಹತ್ತು ಜನ ಬೈಕ್ ರೈಡ್ ಪ್ರಿಯರು ತೆರಳಿದ್ದು, ಈ ತಂಡದಲ್ಲಿ 3 ಮಂದಿ ಪೊಲೀಸ್ ಸಿಬ್ಬಂದಿಗಳು ಸಹ ಭಾಗವಹಿಸಿದ್ದು, ರೈಡರ್ ಗಳ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಸುರಕ್ಷಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 