ಅಂತರರಾಷ್ಟ್ರೀಯ ಅಪಸ್ಮಾರ ದಿನಾಚರಣೆ: ಜಾಥಾ
International Epilepsy Day: Rally
ಧಾರವಾಡ 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಧಾರವಾಡ, ರಾಷ್ಟ್ರೀಯ ಮಾನಸಿಕ ಹಾಗೂ ನರವಿಜ್ಞಾನಗಳ ಸಂಸ್ಥೆ, ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ ದಿ. 11ರಂದು ಬೆಳಿಗ್ಗೆ 9.30 ಗಂಟೆಗೆ ಅಂತರರಾಷ್ಟ್ರೀಯ ಅಪಸ್ಮಾರ ದಿನಾಚರಣೆಯ-2026ರ ಅಂಗವಾಗಿ ಜಿಲ್ಲಾಮಟ್ಟದ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಧಾರವಾಡ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಮ್.ಹೊನಕೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ಇದೊಂದು ಕಳಂಕವಲ್ಲ ಖಾಯಿಲೆ ಸರಿಯಾದ ಚಿಕಿತ್ಸೆಯ ಮೂಲಕ ಈ ಖಾಯಿಲೆಯನ್ನು ಹೋಗಲಾಡಿಸಬಹುದಾಗಿದ್ದು ಸರಕಾರದಿಂದ ಹೊಸತಾಗಿ ಆರಂಭವಾದ ಕರ್ನಾಟಕ ಮೆದಳು ಆರೋಗ್ಯ ಉಪಕ್ರಮ ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಲು ತಿಳಿಸಿದರು.
ಮೆದಳು ಆರೋಗ್ಯ ಉಪಕ್ರಮ ಕಾರ್ಯಕ್ರಮ ವಿಭಾಗ ಧಾರವಾಡ, ಜಿಲ್ಲಾ ನೋಡಲ್ ಅಧಿಕಾರಿ ಡಾ. ಕಳಸೂರಮಠ ಎಸ್.ಬಿ. ಸ್ವಾಗತಿಸಿ ಮಾತನಾಡಿ ಹಾಗೂ ನರರೋಗಗಳ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆ ರೂಂ ನಂ 29 ಇಲ್ಲಿ ಪಡೆದುಕೊಳ್ಳಲು ತಿಳಿಸಿದರು.
ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ. ಸುಜಾತಾ ಹಸವಿಮಠ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ ಚಿತ್ತರಗಿ, ಜಿಲ್ಲಾ ಸಮೀಕ್ಷಣಾ ಅಧಿಕಾರಿ ಡಾ. ಪರಶುರಾಮ ಏಫ್ ಕೆ, ಜಿಲ್ಲಾ ನೋಡಲ್ ಅಧಿಕಾರಿ ಡಾ. ಕಳಸೂರಮಠ ಎಸ್.ಬಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಮಂಜುನಾಥ ಸೂಪ್ಪಿಮಠ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ರವಿಂದ್ರ ಬೊವೇರ, ತಾಲೂಕಾ ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್, ಕಾಲರಾ ಕಂಟ್ರೋಲರ್ ಆಫಿಸರ್ ಡಾ. ಗೌರಿ ಬೆಲ್ಲದ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 