ಬೆಳಗಾವಿ 29: ಕೆಎಲ್‌ಇ ಸಂಸ್ಥೆಯ ವೇಣುಧ್ವನಿ 90.4 ಎಫ್‌ಎಮ್ ಕೇಂದ್ರದಿಂದ ಶನಿವಾರ ದಿನಾಂಕ 29ನೆ ಮಾರ್ಚ್ 2025 ರಂದು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೆಎಲ್‌ಇ ವಿಶ್ವ ವಿದ್ಯಾಲಯದ ಪರೀಕ್ಷಾ ನಿಯಂತ್ರಕರಾದ ಡಾ. ಚಂದ್ರಾ ಮೆಟಗುಡ್ಡ ಅವರು ಮಾತನಾಡಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಕೆಎಲ್‌ಇ ವೇಣುಧ್ವನಿ ರೇಡಿಯೋ ಕೆಂದ್ರದಿಂದ ಮಾರ್ಚ್ ಒಂದು ತಿಂಗಳ ಕಾಲ ಪ್ರತಿದಿನ ಬೆಳಗಾವಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಸಮಾಜಕ್ಕೆ ಅವರ ಕೊಡುಗೆಯನ್ನು ಪರಿಚಯಿಸಿರುವುದು ಅತ್ಯಂತ ಪ್ರಶಂಷನೀಯ ಎಂದರು.
ಅಂತರಾಷ್ಟ್ರೀಯ ಮಹಿಳಾ ದಿನವು ಲಿಂಗ ಸಮಾನತೆ, ಮಹಿಳೆಯರ ಹಕ್ಕುಗಳು ಮತ್ತು ಮಹಿಳೆಯರ ಸುರಕ್ಷತೆ ಕುರಿತಾಗಿ ಹೆಚ್ಚು ಮಹತ್ವ ಹೊಂದಿದೆ ಈ ನಿಟ್ಟಿನಲ್ಲಿ ಕೆಎಲ್‌ಇ ವೇಣುಧ್ವನಿ ಸಮುದಾಯ ಬಾನುಲಿ ಕೇಂದ್ರವು ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ಅನೇಕ ಕ್ಷೇತ್ರಗಳಲ್ಲಿಯ ಸಾಧನೆಗಳ ಕುರಿತು ಜಾಗೃತಿ ಮೂಡಿಸಲು ಇದು ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆ ಎನ್ನುಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕೆಎಲ್‌ಇ ವೇಣುಧ್ವನಿ ಬಾನುಲಿ ಕೇಂದ್ರದ ನಿಲಯ ನಿರ್ವಾಹಕ ಡಾ. ವಿರೇಶಕುಮಾರ ನಂದಗಾಂವ್ ಅವರು ಮಾತನಾಡಿ ಒಬ್ಬವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಿರುತ್ತದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ, ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ಧಾರಿಯನ್ನಯ ಹೊರುವ ಜೋತೆಗೆ ಇಂದು ಅನೇಕ ಕ್ಷೇತ್ರಗಳಲ್ಲಿಯೂ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾಳೆ, ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಇಂದಿನ ಆಧುನಿಕ ತಂತ್ರಜ್ಞಾನ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ ಈ ನಿಟ್ಟಿನಿಲ್ಲಿ ಕೆಎಲ್‌ಇ ವೇಣುಧ್ವನಿ ರೇಡಿಯೋ ಕೇಂದ್ರದಿಂದ ಮಹಿಳೆಯರಿಗಾಗಿ ಗೌರವಾನ್ವಿತವಾಗಿ ಈ ಒಂದು ದಿನವನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು ಮತ್ತು ಭಾಗವಹಿಸಿದ್ದ ಮಹಿಳೆಯರು ಕಾರ್ಯಕ್ರಮದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಕೆಎಲ್‌ಇ ವೇಣುಧ್ವನಿ ಕೇಂದ್ರದ ಕಾರ್ಯಕ್ರಮ ಸಂಯೋಜಕ ಮಂಜುನಾಥ ಬಳ್ಳಾರಿ, ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ವೇಣುಧ್ವನಿ ಕಾರ್ಯಕ್ರಮ ನಿರ್ವಾಹಕರಾದ ಮಂಜುನಾಥ ಪೈ ಮತ್ತು ನಿಷಾ ಟಕ್ಕರ ಕಾರ್ಯಕ್ರಮ ನಿರೂಪಿಸಿದರು.