ಬಾಲಕಿಯರ ವಸತಿ ನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
International Women's Day celebration at the girls' hostel
ಕೊಪ್ಪಳ 09: ನಗರದ ಡಾ. ಬಿಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ 2026ರ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಮಹಿಳಾ ಘಟಕ ಕೊಪ್ಪಳ ಮತ್ತು ಆಯುಷ್ಮಾನ್ ಆರೋಗ್ಯ ಮಂದಿರ್ ಕಾಮನೂರು ಇವರ ಸಂಯೋಗದಲ್ಲಿ ರವಿವಾರದಂದು ಯಶಸ್ವಿಯಾಗಿ ಜರುಗಿತು, ಮಹಿಳಾ ದಿನಾಚರಣೆ ಅಂಗವಾಗಿ ವಸತಿ ನಿಲಯದ ಬಾಲಕಿಯರಿಗೆ ವೈಯಕ್ತಿಕ ಶುಚಿತ್ವದ ಬಗ್ಗೆ ಮಾಹಿತಿಯನ್ನು ನೀಡಿ ಅವರ ಆರೋಗ್ಯ ತಪಾಸನೆ ಮಾಡುವುದರ ಮೂಲಕ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಗೆ ಚಾಲನೆ ನೀಡಲಾಯಿತು,ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ ಮಹಿಳಾ ಘಟಕದ ಅಧ್ಯಕ್ಷರಾದ ಡಾ, ಕಸ್ತೂರಿ ಕರಮುಡಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಶುಚಿತ್ವದ ಬಗ್ಗೆ ಮಾಹಿತಿ ಮತ್ತು ಆರೋಗ್ಯ ಕಾಪಾಡಿಕೊಳ್ಳುವುದರ ಬಗ್ಗೆ ಜಾಗೃತಿ ನೀಡಿದರು, ಅಲ್ಲದೆ ಡಾ, ಭಾಗ್ಯಶ್ರೀ ಗಾಯದ, ಡಾ, ಕವಿತಾ ಹ್ಯಾಟಿ, ಡಾ. ರುದ್ರಾಕ್ಷಿ ದೇವರ ಗುಡಿ, ಡಾ, ಉಮಾ ಪಾಟೀಲ್ ಮತ್ತಿತರರು ಕಾರ್ಯಕ್ರಮ ಕುರಿತು ಮಾತನಾಡಿದರು, ಈ ಸಂದರ್ಭದಲ್ಲಿ ಡಾ, ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನಿಲಯಪಾಲಕೀ ಜಹಾನ್‌ಆರ ಜಾಲಿಹಾಳ ಸೇರಿದಂತೆ ವಸತಿ ನಿಲಯದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 